Headlines

ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

A tragic road accident near Garthikere, close to Ripponpete, claimed the life of 30-year-old Nayaz from Sunnadabasti after a lorry ran over him near a bus stop. Police have launched an investigation.

ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತನನ್ನು ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಗ್ರಾಮದ ನಿವಾಸಿ ನಯಾಜ್ (30) ಎಂದು ಗುರುತಿಸಲಾಗಿದೆ. ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ ರಿಪ್ಪನ್‌ಪೇಟೆಯಿಂದ ಕೋಣಂದೂರು ಕಡೆಗೆ ಸಾಗುತ್ತಿದ್ದ ಜಂಬಿಟ್ಟಿಗೆ ಲಾರಿ ನಯಾಜ್ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ನಯಾಜ್ ಅವರು ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜು ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version