POSTMANNEWS

ನೈಜ ಸುದ್ದಿ ನೇರ ಬಿತ್ತರ..

ಗರ್ತಿಕೆರೆ ಬಳಿ ಸ್ಕೂಟಿ–ಎಮ್ಮೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಭಾಸ್ಕರ್ ಶೆಟ್ಟಿ ನಿಧನ

A man died after a scooty collided with a buffalo near Avuka Circle in Garthikere, Ripponpet. The victim succumbed to injuries during treatment in Shivamogga.

ರಿಪ್ಪನ್‌ಪೇಟೆ: ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಕೋಣಂದೂರು ಸಮೀಪದ ಹಾದಿಗಲ್ಲು ಗ್ರಾಮದ ಭಾಸ್ಕರ್ ಶೆಟ್ಟಿ ಮೃತ ದುರ್ಧೈವಿಯಾಗಿದ್ದಾರೆ.

ಕಳೆದ ಮಂಗಳವಾರ ರಾತ್ರಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅಚಾನಕ್ ರಸ್ತೆ ದಾಟುತ್ತಿದ್ದ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು, ಈ ವೇಳೆ ಭಾಸ್ಕರ್ ಶೆಟ್ಟಿ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಆಂಬುಲೆನ್ಸ್‌ಗೆ ಕರೆ ಮಾಡಿದರೂ, ಅದು ತಡವಾಗಿ ಬಂದ ಹಿನ್ನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಚಿನ್ ಗೌಡ ಹಾಗೂ ಅವರ ಸ್ನೇಹಿತರು ಗಾಯಾಳುವನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ನಂತರ ಮಾರ್ಗಮಧ್ಯೆ ಆಂಬುಲೆನ್ಸ್‌ಗೆ ಶಿಫ್ಟ್ ಮಾಡಲಾಗಿತ್ತು.

ಗಾಯಾಳುವಿಗೆ ಮೊದಲಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ಭಾಸ್ಕರ್ ಶೆಟ್ಟಿ ಮೃತಪಟ್ಟಿದ್ದಾರೆ.

ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Exit mobile version