POSTMANNEWS

ನೈಜ ಸುದ್ದಿ ನೇರ ಬಿತ್ತರ..

ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ

A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ರಸ್ತೆ ಕಾಮಗಾರಿ ಸಂಬಂಧ ಗ್ರಾಮಸ್ಥನೊಬ್ಬ ಪ್ರಶ್ನೆ ಕೇಳಿದ್ದಕ್ಕೆ ಆಕ್ರೋಶಗೊಂಡ ಪಂಚಾಯಿತಿ ಸದಸ್ಯ ಧರ್ಮಪ್ಪ, ಸ್ಥಳೀಯ ನಿವಾಸಿ ರಮೇಶ್ ಅವರೊಂದಿಗೆ ವಾಗ್ವಾದಕ್ಕಿಳಿದು, ಸಾರ್ವಜನಿಕರ ಮುಂದೆ ಅವಾಚ್ಯ ಹಾಗೂ ಅಸಭ್ಯ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಕೋಪದ ಅತಿರೇಕದಲ್ಲಿ ಧರ್ಮಪ್ಪ ಪಾದರಕ್ಷೆಯಿಂದ ಹೊಡೆಯಲು ಮುಂದಾದ ಘಟನೆ ನಡೆದಿದೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ. ಜನಪ್ರತಿನಿಧಿಯೇ ಈ ರೀತಿಯ ವರ್ತನೆ ತೋರಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

About The Author

Exit mobile version