POSTMANNEWS

ನೈಜ ಸುದ್ದಿ ನೇರ ಬಿತ್ತರ..

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ.

5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್

ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದು, “5 ಕೋಟಿ ಅಲ್ಲ, ಬೇಕಾದರೆ 25 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಲಿ, ಎದುರಿಸಲು ಸಿದ್ಧ” ಎಂದು ಬಹಿರಂಗ ಸವಾಲ್ ಹಾಕಿದ್ದಾರೆ.

ಸಿಗಂದೂರು ದೇವಸ್ಥಾನದ ಆಡಳಿತ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭವಾದ ವಾಕ್ಸಮರ ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಏನಿದು ಪ್ರಕರಣ?

ಮಾಜಿ ಸಚಿವ ಹರತಾಳು ಹಾಲಪ್ಪ ಅವರು, ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ 5 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಶಾಸಕ ಬೇಲೂರು ಗೋಪಾಲಕೃಷ್ಣ, ಹಾಲಪ್ಪ ವಿರುದ್ಧ ತೀವ್ರ ಆರೋಪಗಳನ್ನು ಮುಂದುವರಿಸಿದ್ದಾರೆ.

ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಪ್ರಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಸಂದರ್ಭದಲ್ಲಿ, ಅಂದಿನ ಶಾಸಕರಾಗಿದ್ದ ಹರತಾಳು ಹಾಲಪ್ಪ ಮೌನ ಸಮ್ಮತಿ ಸೂಚಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ರಾಮಪ್ಪನವರೊಂದಿಗೆ ಹಾಲಪ್ಪ ಅವರಿಗಿದ್ದ ವೈಮನಸ್ಸಿನ ಕಾರಣದಿಂದಲೇ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಆ ಸಮಯದಲ್ಲಿ ನಾನು ಶಾಸಕನಾಗಿದ್ದರೆ ಸಿಗಂದೂರು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸುವುದನ್ನು ಪ್ರಬಲವಾಗಿ ವಿರೋಧಿಸುತ್ತಿದ್ದೆ” ಎಂದು ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

25 ಕೋಟಿ ಮೊಕದ್ದಮೆಗೂ ಸಿದ್ಧ

“ನನ್ನ ಮಾತುಗಳು ಸತ್ಯಾಧಾರಿತವಾಗಿವೆ. 5 ಕೋಟಿ ಅಲ್ಲ, ಬೇಕಾದರೆ 25 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಲಿ. ಅದನ್ನು ಎದುರಿಸಲು ನಾನು ಸಂಪೂರ್ಣ ಸಿದ್ಧನಿದ್ದೇನೆ” ಎಂದು ಶಾಸಕ ಬೇಲೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.

About The Author

Exit mobile version