The second annual floodlight volleyball tournament will be held on January 17, 2026, at Kargodu village near Ripponpet, Shivamogga district.
ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ
ರಿಪ್ಪನ್‌ಪೇಟೆ : ಇಲ್ಲಿನ ಕಾರಗೋಡು–ಕರಡಿಗ–ಬೆಳಕೋಡು ಗ್ರಾಮಸ್ಥರ ಸಹಕಾರದೊಂದಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ಅಪ್ಪು ಗೆಳೆಯರ ಬಳಗದ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಈ ಪಂದ್ಯಾವಳಿ 2026ರ ಜನವರಿ 17ರಂದು (ಶನಿವಾರ) ಸಂಜೆ 7 ಗಂಟೆಗೆ ಕಾರಗೋಡು ಗ್ರಾಮದಲ್ಲಿ ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಗ್ರಾಮೀಣ ಹಾಗೂ ನಗರ ತಂಡಗಳು ಪಾಲ್ಗೊಳ್ಳಲಿವೆ.
ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಗುತ್ತದೆ.
ಪ್ರಥಮ ಬಹುಮಾನ ₹12,000, ದ್ವಿತೀಯ ಬಹುಮಾನ ₹8,000, ತೃತೀಯ ಬಹುಮಾನ ₹6,000 ಹಾಗೂ ಚತುರ್ಥ ಬಹುಮಾನ ₹4,000 ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ಜೊತೆಗೆ ಬೆಸ್ಟ್ ಆಟ್ಯಾಕರ್, ಬೆಸ್ಟ್ ಪಾಸರ್ ಮತ್ತು ಬೆಸ್ಟ್ ಲಿಬ್ರೋ ಪ್ರಶಸ್ತಿಗಳು ಇರಲಿವೆ.
ತಂಡಗಳಿಗಾಗಿ ಪ್ರವೇಶ ಶುಲ್ಕ ₹900 ನಿಗದಿಪಡಿಸಲಾಗಿದೆ. ಗ್ರಾಮೀಣ ತಂಡಗಳಿಗೆ ಪ್ರತ್ಯೇಕ ಪೋಲ್ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ಆಟಗಾರರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕ್ಲಬ್ ಪಂದ್ಯಗಳಲ್ಲಿ ಭಾಗವಹಿಸಿರುವ ಆಟಗಾರರಿಗೆ ಗ್ರಾಮೀಣ ಪೋಲ್‌ನಲ್ಲಿ ಅವಕಾಶ ಇರುವುದಿಲ್ಲ. ಸಿಟಿ ತಂಡಗಳಿಗೆ ಮುಕ್ತ ಅವಕಾಶವಿದ್ದು, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳು 2026ರ ಜನವರಿ 16ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಎಲ್ಲಾ ತಂಡಗಳು ಪಂದ್ಯ ದಿನ ಸಂಜೆ 7 ಗಂಟೆಯೊಳಗೆ ಸ್ಥಳಕ್ಕೆ ಹಾಜರಾಗಬೇಕು. ಅಸಭ್ಯ ವರ್ತನೆ ತೋರಿಸುವ ತಂಡಗಳನ್ನು ಪಂದ್ಯಾವಳಿಯಿಂದ ಹೊರಹಾಕಲಾಗುವುದು. ವ್ಯವಸ್ಥಾಪಕರು ಹಾಗೂ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9902477782, 8277126915, 9008145561, 8861877056
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…