ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ

KCET 2026 exam dates have been officially announced by the Karnataka Examinations Authority. The entrance test will be conducted on April 23 and 24, 2026. Online registration begins from January 17.

ಕೆಸಿಇಟಿ–2026: ಏಪ್ರಿಲ್ 23 ಮತ್ತು 24ರಂದು ಪರೀಕ್ಷೆ | ವೇಳಾಪಟ್ಟಿ ಪ್ರಕಟ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)–2026ರ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಈ ವರ್ಷ ಕೆಸಿಇಟಿ ಪರೀಕ್ಷೆಗಳು ಏಪ್ರಿಲ್ 23 ಮತ್ತು 24ರಂದು ನಡೆಯಲಿವೆ.

ಅಭ್ಯರ್ಥಿಗಳು ಜನವರಿ 17ರಿಂದ ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ 2026ನೇ ಸಾಲಿನ ಪ್ರವೇಶ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಈ ಬಾರಿಯೂ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಒಟಿಪಿ (OTP) ಆಧಾರಿತ ವ್ಯವಸ್ಥೆ ಮುಂದುವರಿಯಲಿದೆ. ಅಭ್ಯರ್ಥಿಗಳು ಲಾಗಿನ್ ಆದ ನಂತರ ತಮ್ಮ ಅರ್ಜಿಯ ವಿವರಗಳನ್ನು ದೃಢೀಕರಿಸಲು ಒಟಿಪಿ ಸಲ್ಲಿಸುವುದು ಕಡ್ಡಾಯವಾಗಿದೆ.

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೈಜ ಸಮಯದಲ್ಲೇ ತಮ್ಮ ಭಾವಚಿತ್ರವನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.

ಇದೇ ವೇಳೆ, ಕೆಸಿಇಟಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಂದಣಿ, ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಉದ್ದೇಶದಿಂದ ‘ಸಿಇಟಿ ದಿಕ್ಕೂಚಿ’ ಎಂಬ ಕೈಪಿಡಿಯನ್ನು ಪ್ರಾಧಿಕಾರ ಬಿಡುಗಡೆ ಮಾಡಲಿದೆ. ಈ ಕೈಪಿಡಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆಯ ಹಂತ ಹಂತದ ಮಾರ್ಗದರ್ಶನ ನೀಡಲಿದ್ದು, ಯಾವುದೇ ಗೊಂದಲವಿಲ್ಲದೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಹಕಾರಿಯಾಗಲಿದೆ.

ಕೆಸಿಇಟಿ–2026ಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ವೇಳಾಪಟ್ಟಿ ಮಹತ್ವದ ಮಾಹಿತಿ ಆಗಿದ್ದು, ಅರ್ಜಿ ಸಲ್ಲಿಕೆ ಮತ್ತು ಪರೀಕ್ಷಾ ದಿನಾಂಕಗಳ ಕುರಿತು ಗಮನ ವಹಿಸುವಂತೆ ಪ್ರಾಧಿಕಾರ ಸೂಚಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

17 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

18 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

18 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago