Headlines

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ |
ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿಗೆ ಹೆಮ್ಮೆಯ ಸಾಧನೆ


ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.


ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆಯುತ್ತಿರುವ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕಿಯರ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ನಲ್ಲಿ ಲಕ್ಷ್ಮೀ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸ್ಪರ್ಧಿಸುತ್ತಿದ್ದಾರೆ. ಶಿಸ್ತಿನ ತರಬೇತಿ, ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದ ಫಲವಾಗಿ ಈ ಮಹತ್ವದ ಸಾಧನೆ ಸಾಧ್ಯವಾಗಿದೆ.


ಲಕ್ಷ್ಮೀ ಅವರ ಈ ಸಾಧನೆಗೆ ಶಾಲೆಯ ಶಿಕ್ಷಕರು, ಪಾಲಕರು, ಶಾಲಾ ಮಂಡಳಿ ಸದಸ್ಯರು, ಜಕ್ಕನಕಟ್ಟಿ ಗ್ರಾಮದ ಗ್ರಾಮಸ್ಥರು ಹಾಗೂ ಸ್ಥಳೀಯ ಶಾಸಕರು ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಹಂತಗಳಿಗೂ ಶುಭಾಶಯಗಳನ್ನು ಕೋರಿದ್ದಾರೆ.


ವರದಿ: ನಿಂಗರಾಜ್ ಕುಡಲ್
ಹಾವೇರಿ ಜಿಲ್ಲೆ, ಬಂಕಾಪುರ್