w
Headlines
Home » ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

GridArt 20260115

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old.

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ

ಕಳೆದ ಕೆಲವು ದಿನಗಳಿಂದ ಗ್ರಾಮಗಳ ಬಳಿ ಚಿರತೆ ಕಾಣಿಸಿಕೊಂಡು ನಾಯಿಗಳನ್ನು ಬೇಟೆಯಾಡುತ್ತಿದ್ದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು.

ಹಿರಿಯೂರು ಗ್ರಾಮದ ಬಳಿ ಸುರೇಶ್ ಎಂಬುವರ ಜಮೀನಿನ ತೋಟದಲ್ಲಿ ಅರಣ್ಯ ಇಲಾಖೆ ಇಡಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಸೆರೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಸುರಕ್ಷತಾ ಕ್ರಮಗಳನ್ನು ಕೈಗೊಂಡು ಚಿರತೆಯನ್ನು ಯಶಸ್ವಿಯಾಗಿ ವಶಕ್ಕೆ ಪಡೆದುಕೊಂಡರು.

ಅರಣ್ಯ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಸೆರೆಯಾದ ಚಿರತೆ ಸುಮಾರು ನಾಲ್ಕರಿಂದ ಐದು ವರ್ಷದ ವಯಸ್ಸಿನದು ಎಂದು ಅಂದಾಜಿಸಲಾಗಿದೆ. ಆರೋಗ್ಯ ತಪಾಸಣೆ ನಡೆಸಿದ ಬಳಿಕ ಯಾವುದೇ ಗಾಯಗಳಿಲ್ಲವೆಂದು ದೃಢಪಡಿಸಿಕೊಂಡು, ಚಿರತೆಯನ್ನು ಭದ್ರಾ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.

ಚಿರತೆ ಸೆರೆಯಾದ ಹಿನ್ನೆಲೆಯಲ್ಲಿ ಗೊಂದಿ ಹಾಗೂ ಹಿರಿಯೂರು ಗ್ರಾಮಸ್ಥರು ನಿರಾಳರಾಗಿದ್ದು, ಅರಣ್ಯ ಇಲಾಖೆಯ ತ್ವರಿತ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದು, ರಾತ್ರಿ ಸಮಯದಲ್ಲಿ ಒಂಟಿಯಾಗಿ ಸಂಚರಿಸುವುದನ್ನು ತಪ್ಪಿಸಬೇಕು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.