Breaking
13 Jan 2026, Tue

RIPPONPETE | ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

A 45-year-old man died by suicide by hanging in a cattle shed at Devikoppa village near Harathalu. Ripponpet police visited the spot and initiated legal proceedings.

RIPPONPETE |  ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ.

ಕುಟುಂಬಸ್ಥರ ಮಾಹಿತಿ ಪ್ರಕಾರ, ಗುರುರಾಜ್ ಅವರು ಕೆಲಕಾಲದಿಂದ ಸಾಲದ ಒತ್ತಡದಿಂದ ಬಳಲುತಿದ್ದು ಈ ಹಿನ್ನಲೆಯಲ್ಲಿ ಮಂಗಳವಾರ ಮನೆ ಸಮೀಪದ ಕೊಟ್ಟಿಗೆಯಲ್ಲಿ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಇರಿಸಲಾಗಿದೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version