ರಿಪ್ಪನ್ ಪೇಟೆ : ರಾಮಕೃಷ್ಣ ವಿದ್ಯಾಲಯದ ಅಂಕಪಟ್ಟಿ ಗೊಂದಲಕ್ಕೆ ತೆರೆ – ಪೋಷಕರ ಹೋರಾಟಕ್ಕೆ ಸಂದ ಜಯ

After months of uncertainty, parents’ collective struggle helped resolve the SSLC 2024–25 marks card issue of Ramakrishna Vidyalaya, Ripponpete, ensuring justice for students’ academic future.

ರಿಪ್ಪನ್ ಪೇಟೆ: 2024–25ನೇ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್ ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಅಂಕಪಟ್ಟಿಗೆ ಸಂಬಂಧಿಸಿದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಜಯ ಯಾವುದೇ ಒಂದು ಸಂಸ್ಥೆಯದ್ದಲ್ಲ, ಮಕ್ಕಳ ಭವಿಷ್ಯಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಪೋಷಕರ ಹೋರಾಟದ ಫಲ ಎಂದು ಸ್ಪಷ್ಟವಾಗಿ ಹೇಳಬಹುದು.

ಪರೀಕ್ಷಾ ನೋಂದಣಿ, ಶುಲ್ಕ ಪಾವತಿ ಹಾಗೂ ಪ್ರವೇಶ ಪತ್ರಗಳಲ್ಲಿ ಶ್ರೀ ರಾಮಕೃಷ್ಣ ವಿದ್ಯಾಲಯದ ಹೆಸರೇ ಇದ್ದರೂ, ಕೆಲವು ಕಾನೂನು ತೊಡಕುಗಳಿಂದ ಮೂಲ ಅಂಕಪಟ್ಟಿಯಲ್ಲಿ ಸರ್ಕಾರಿ ಪ್ರೌಢ ಶಾಲೆಯ ಹೆಸರು ನಮೂದಾಗಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ಈ ಅನ್ಯಾಯದ ವಿರುದ್ಧ ಪೋಷಕರು ಒಂದಾಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಧ್ವನಿ ಎತ್ತಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಚಿವರು, ಶಾಸಕರು ಹಾಗೂ ನ್ಯಾಯಾಲಯದವರೆಗೂ ಮನವಿ ಸಲ್ಲಿಸಿ ಹೋರಾಟ ನಡೆಸಿದರು. ಪೋಷಕರು ಹಾಗೂ ಶಾಲಾಡಳಿತ ಮಂಡಳಿ ಅಧ್ಯಕ್ಷ ದೇವರಾಜ್ ರವರ ನಿರಂತರ ಒತ್ತಡ ಮತ್ತು ಹಠದ ಫಲವಾಗಿ, ಸುಮಾರು ನಾಲ್ಕು ತಿಂಗಳ ಹೋರಾಟದ ಬಳಿಕ ಅಂಕಪಟ್ಟಿ ಗೊಂದಲವನ್ನು ಬಗೆಹರಿಸಲು ಸಾಧ್ಯವಾಗಿದೆ.

ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಅಂಕಪಟ್ಟಿ ವಿತರಣಾ ಕಾರ್ಯಕ್ರಮದಲ್ಲಿ ಸಂಸ್ಥಾಪಕ ದೇವರಾಜ್ ಮಾತನಾಡಿ, “ಈ ಸಮಸ್ಯೆ ಪರಿಹಾರವಾಗಲು ಪೋಷಕರು ತೋರಿದ ಸಹನೆ, ಧೈರ್ಯ ಮತ್ತು ಹೋರಾಟವೇ ಮುಖ್ಯ ಕಾರಣ. ಇನ್ನು ಪೋಷಕರು ಆತಂಕಪಡುವ ಅವಶ್ಯಕತೆಯಿಲ್ಲ,” ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲಗೋಡು ರತ್ನಾಕರ್ ಮಾತನಾಡಿ, “ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಕೈಗೊಂಡ ಹೋರಾಟ ಶ್ಲಾಘನೀಯ. ಅವರ ನಿರಂತರ ಪ್ರಯತ್ನದಿಂದಲೇ ಮಕ್ಕಳಿಗೆ ಅತ್ಯಂತ ಮಹತ್ವದ ಅಂಕಪಟ್ಟಿ ಸಿಕ್ಕಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪರವಾಗಿ ಸ್ಪಂದಿಸಿದ ಕಲಗೋಡು ರತ್ನಾಕರ್ ಹಾಗೂ ದೇವರಾಜ್ ಅವರನ್ನು ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮಧುಸೂದನ್, ಹಿರಿಯಣ್ಣ ಭಂಡಾರಿ, ಪೋಷಕರು ಹಾಗೂ ಶಿಕ್ಷಕ ವರ್ಗ ಉಪಸ್ಥಿತರಿದ್ದರು.

ಮಕ್ಕಳ ಭವಿಷ್ಯಕ್ಕಾಗಿ ಏಕತೆಯಿಂದ ಹೋರಾಡಿದಾಗ ನ್ಯಾಯ ಸಿಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಕಾನೂನಾತ್ಮಕ ಗೊಂದಲಗಳು ಮರುಕಳಿಸದಂತೆ ಸಂಬಂಧಪಟ್ಟವರು ಎಚ್ಚರ ವಹಿಸಬೇಕೆಂಬುವುದೇ ಪೋಸ್ಟ್‌ಮ್ಯಾನ್ ನ್ಯೂಸ್ ನ ಆಶಯ…

2024 -25 ನೇ ಸಾಲಿನ ಶ್ರೀ  ರಾಮಕೃಷ್ಣ ವಿದ್ಯಾಲಯ ರಿಪ್ಪನ್ ಪೇಟೆಯ ೧೦ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷಾ ನೊಂದಣಿ ಮತ್ತು ಶುಲ್ಕ ಪಾವತಿಯು ಶ್ರೀ ರಾಮಕೃಷ್ಣ ವಿದ್ಯಾಲಯದ ಹೆಸರಲ್ಲೆ ಆಗಿದ್ದು,ಪ್ರವೇಶ ಪತ್ರದಲ್ಲಿಯೂ ಶಾಲೆಯ ಹೆಸರೇ ಇರುತ್ತದೆ ಆದರೆ ಮೂಲ ಅಂಕಪಟ್ಟಿಯಲ್ಲಿ ಕೆಲವು ಕಾನೂನು ತೊಡಕುಗಳಿಂದ  ಸರ್ಕಾರಿ ಪ್ರೌಢ ಶಾಲೆಯ ಹೆಸರು ನಮೂದಾಗಿದ್ದು ಇದನ್ನು ಸರಿಪಡಿಸಲು ಶಾಲಾ ಮಂಡಳಿಯೂ ಸತತ ಪರಿಶ್ರಮದಿಂದ ಸಾಧ್ಯವಾಗಿದೆ . ನಮ್ಮ ಶಾಲೆಯ ಪ್ರತಿಭೆಗಳ ಶೈಕ್ಷಣಿಕ ಸಾಧನೆಯು ಸರ್ಕಾರಿ ಶಾಲೆಗಳ ಪಾಲಾಗಿದ್ದು ಅದನ್ನು ಸರಿಪಡಿಸುವ ಹೋರಾಟದಲ್ಲಿ ಸತ್ಯದಪರವಾಗಿ ಗೆಲುವು ನಮ್ಮದಾಗಿದೆ , ಇನ್ನು ಪೋಷಕರು ಆತಂಕಪಡುವ ಅವಶ್ಯಕತೆಯಿಲ್ಲ  

ದೇವರಾಜ್ ,ಶ್ರೀ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ

ನಿರಂತರವಾಗಿ ಶಿಕ್ಷಣ ಇಲಾಖೆಯವರೊಂದಿಗೆ ಹೋರಾಟ ನಡೆಸಿ ,ನ್ಯಾಯಾಲಯದ ಮೊರೆಯನ್ನಿಟ್ಟಿದ್ದ ಶಾಲಾ ಆಡಳಿತ ಮಂಡಳಿಯು ಸುಮಾರು 4 ತಿಂಗಳ ಹೋರಾಟದ ಮೂಲಕ ಅಂಕಪಟ್ಟಿಯನ್ನು ವಿತರಿಸಿದೆ.ಮಕ್ಕಳ ಭವಿಷ್ಯಕ್ಕೆ ಅತ್ಯಂತ ಪ್ರಮುಖವಾಗಿರುವ ಅಂಕ ಪಟ್ಟಿಯನ್ನು ದೊರಕಿಸುವಲ್ಲಿ ಶಾಲಾ ಆಡಳಿತ ಮಂಡಳಿಯೂ ಸಫಲವಾಗಿದೆ‌.

ಕಲಗೋಡು ರತ್ನಾಕರ್ ,ಶಿವಮೊಗ್ಗ ಜಿಪಂ ಮಾಜಿ ಉಪಾಧ್ಯಕ್ಷರು

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

12 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

12 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago