ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues.

ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ. ಜನವರಿ 1ರಂದು ಕಾವ್ಯಾಗೆ ಹೆರಿಗೆಯಾಗಿದ್ದು, ದುರದೃಷ್ಟವಶಾತ್ ಆ ಮಗು ಸಾವನ್ನಪ್ಪಿತ್ತು. ಮಗುವಿನ ನಷ್ಟದಿಂದ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದ ಕಾವ್ಯಾರ ಆರೋಗ್ಯದ ಮೇಲೆ ಇದರ ಪರಿಣಾಮ ಬೀರಿತೇ ಎಂಬ ಪ್ರಶ್ನೆಗಳು ಮೂಡಿವೆ.

ಹೆರಿಗೆ ನಂತರ ವಿಶ್ರಾಂತಿಗಾಗಿ ಕಾವ್ಯಾ ಅವರು ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮದ ಚಿಕ್ಕನಹಳ್ಳಿಯ ತವರು ಮನೆಯಲ್ಲಿ ವಾಸವಾಗಿದ್ದರು. ಈ ವೇಳೆ ಅವರ ಆರೋಗ್ಯದಲ್ಲಿ ಏಕಾಏಕಿ ತೀವ್ರ ಏರುಪೇರಾಗಿದ್ದು, ಕುಟುಂಬಸ್ಥರು ತಕ್ಷಣ ಆಂಬುಲೆನ್ಸ್‌ಗೆ ಕರೆ ಮಾಡಲು ಯತ್ನಿಸಿದರು. ಆದರೆ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ ಇದ್ದ ಕಾರಣ ತುರ್ತು ಸೇವೆಗಳೊಂದಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಬಳಿಕ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದ ವೇಳೆ ಮಾರ್ಗ ಮಧ್ಯೆ ಕಾವ್ಯಾ ಕೊನೆಯುಸಿರೆಳೆದಿದ್ದಾರೆ.

ಆರೋಪಗಳು

ಈ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಆರೋಗ್ಯ ಇಲಾಖೆಯ ವಿರುದ್ಧ ನಿರ್ಲಕ್ಷ್ಯದ ಆರೋಪಗಳು ಕೇಳಿಬಂದಿವೆ. ಹೆರಿಗೆ ನಂತರ ಬಾಣಂತಿಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲು ಆಶಾ ಕಾರ್ಯಕರ್ತೆಯರು ಅಥವಾ ಸಂಬಂಧಪಟ್ಟ ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿಲ್ಲ ಎಂಬ ಆರೋಪವನ್ನು ಮೃತರ ಸಂಬಂಧಿಕರು ಮಾಡಿದ್ದಾರೆ. ಹೆರಿಗೆ ನಂತರದ ಆರೈಕೆ ಹಾಗೂ ನಿಯಮಿತ ತಪಾಸಣೆ ಸಮರ್ಪಕವಾಗಿ ನಡೆದಿದ್ದರೆ ಈ ಅಮೂಲ್ಯ ಜೀವ ಉಳಿಯಬಹುದಿತ್ತು ಎಂಬ ಆಕ್ರೋಶವೂ ವ್ಯಕ್ತವಾಗಿದೆ.

ಆಡಳಿತದ ಸ್ಪಷ್ಟನೆ

ಈ ಕುರಿತು ಮಾತನಾಡಿದ ತಾಲೂಕು ತಹಸೀಲ್ದಾರ್, ಮದುವೆಯಾಗಿ ಏಳು ವರ್ಷಗಳೊಳಗೆ ಮಹಿಳೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನಿಯಮಾನುಸಾರ ಪರಿಶೀಲನೆ ನಡೆಸಲಾಗಿದೆ. ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮೃತರು ವಾಸವಾಗಿದ್ದ ಪ್ರದೇಶ ಕುಗ್ರಾಮವಾಗಿದ್ದು, ನೆಟ್ವರ್ಕ್ ಸಮಸ್ಯೆ ಹಾಗೂ ವೈದ್ಯಕೀಯ ಸೌಲಭ್ಯಗಳ ಕೊರತೆ ಇರುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಸಾವಿನ ನಿಖರ ಕಾರಣ ಸಂಪೂರ್ಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ಹೇಳಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 hour ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago