POSTMANNEWS

ನೈಜ ಸುದ್ದಿ ನೇರ ಬಿತ್ತರ..

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported.

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್‌ಬಿಕೆ’ ಎಂಬ ಖಾಸಗಿ ಬಸ್ ಹುಲಿದೇವರಬನದ ಬಳಿ ಸಂಚರಿಸುತ್ತಿದ್ದಾಗ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಸ್‌ನಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡುದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು ತಕ್ಷಣ ಚಾಲಕನಿಗೆ ಮಾಹಿತಿ ನೀಡಿದ್ದಾರೆ. ಕ್ಷಣಾರ್ಧದಲ್ಲಿ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ, ಗ್ರಾಮಸ್ಥರು ಹಾಗೂ ಬಸ್ ಸಿಬ್ಬಂದಿಗಳ ಸಹಾಯದಿಂದ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ.

ಪ್ರಯಾಣಿಕರು ಇಳಿದ ನಂತರ ಬೆಂಕಿಯ ಕೆನ್ನಾಲಿಗೆ ಬಸ್ಸಿನ ಕೆಲ ಭಾಗಗಳಿಗೆ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

About The Author