ರಿಪ್ಪನ್‌ಪೇಟೆ – ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ
ರಿಪ್ಪನ್‌ಪೇಟೆ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆ, ಆರೋಗ್ಯ ಕೇಂದ್ರಗಳು ಹಾಗೂ ಧಾರ್ಮಿಕ ಸಂಸ್ಥೆಗಳಲ್ಲಿ ಇಂದು ಭವ್ಯವಾಗಿ ದ್ವಜಾರೋಹಣ ನೆರವೇರಿತು.
ಪಟ್ಟಣದ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಧ್ಯಕ್ಷೆ ಧನಲಕ್ಷ್ಮಿ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ರಾಜುರೆಡ್ಡಿ ದ್ವಜಾರೋಹಣ ಮಾಡಿ ದ್ವಜಾವಂದನೆ ಸ್ವೀಕರಿಸಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಂಜಪ್ಪ ಅವರು ರಾಷ್ಟ್ರಧ್ವಜ ಹಾರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಸುಮಿತ್ರ, ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿ, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಆರ್., ಶ್ರೀ ಗುರು ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಉಮೇಶ ಕಂಬಳೆ ಅವರು ದ್ವಜಾರೋಹಣ ನೆರವೇರಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯ ಪ್ರೊ. ವಿರೂಪಾಕ್ಷಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಕೃಷ್ಣಮೂರ್ತಿ, ಸರ್ಕಾರಿ ಪಶು ಆಸ್ಪತ್ರೆಯಲ್ಲಿ ಡಾ. ಸಂತೋಷಕುಮಾರ್, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಚಿಕ್ಕಜೇನಿ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಪಿ.ಕೆ. ಮೊಹಮ್ಮದ್ ಅಲಿ ಅವರು ದ್ವಜಾವಂದನೆ ಸ್ವೀಕರಿಸಿದರು.
ಕೋಡೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಾಧ್ಯಕ್ಷ ಜೈಪ್ರಕಾಶ ಶೆಟ್ಟರು, ಮೇರಿಮಾತಾ ಪ್ರೌಢಶಾಲೆಯಲ್ಲಿ ಪ್ರಾಚಾರ್ಯ ಜಸ್ಲಿನ್, ಗುಡ್‌ಶೆಫರ್ಡ್ ಶಾಲೆಯಲ್ಲಿ ಪಾ. ಬಿನೋಯಿ ಅವರು ಧ್ವಜಾರೋಹಣ ನೆರವೇರಿಸಿದರು. ಅರಸಾಳು ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ವಲಯ ಅರಣ್ಯಾಧಿಕಾರಿ ಶರಣಪ್ಪ, ಸಿರಿಗೆರೆ ವಲಯ ಅರಣ್ಯಾಧಿಕಾರಿ ಕಚೇರಿಗಳಲ್ಲಿ ಆರ್‌ಎಫ್‌ಒ ಅರವಿಂದ ಅವರು ರಾಷ್ಟ್ರಧ್ವಜ ಹಾರಿಸಿದರು. ಮೂಗೂಡ್ತಿ ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಪವನ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಮಿತಿ ಅಧ್ಯಕ್ಷ ಹಸನಬ್ಬ ಅವರು ಧ್ವಜಾರೋಹಣ ನೆರವೇರಿಸಿದರು. ಕೆರೆಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸುಂದರೇಶ್ ಅವರು ದ್ವಜಾರೋಹಣ ಮಾಡಿ ಗಣರಾಜ್ಯೋತ್ಸವಕ್ಕೆ ಗೌರವ ಸಲ್ಲಿಸಿದರು.
ಪಟ್ಟಣದಾದ್ಯಂತ ದೇಶಭಕ್ತಿ ಗೀತೆಗಳು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
