POSTMANNEWS

ನೈಜ ಸುದ್ದಿ ನೇರ ಬಿತ್ತರ..

ರಸ್ತೆಯಲ್ಲೇ ಮರಣಗುಂಡಿ! ಕೆರೆಹಳ್ಳಿಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು | ಯುವಕನಿಗೆ ಗಂಭೀರ ಗಾಯ

A car fell into an open pit dug for road work in Kerehalli near Rippenpete, causing a serious accident. One person was critically injured and shifted to Meggan Hospital, Shivamogga.

ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕೆರೆಹಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯ ಮೇಲೆ ನಡೆಯುತ್ತಿದ್ದ ಕಾಮಗಾರಿಗೆ ತೆರೆದಿದ್ದ ಹೊಂಡಕ್ಕೆ ಕಾರೊಂದು ಬಿದ್ದು ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಮನೋಜ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸ್ಥಳೀಯರ ಮಾಹಿತಿ ಪ್ರಕಾರ, ಮುಖ್ಯ ರಸ್ತೆಯಲ್ಲಿ ಕಾಮಗಾರಿಗಾಗಿ ತೆಗೆದಿದ್ದ ಹೊಂಡವನ್ನು ಮುಚ್ಚದೇ ಹಾಗೆಯೇ ಬಿಟ್ಟಿದ್ದು, ಅಪಾಯ ಸೂಚಿಸುವ ಯಾವುದೇ ಸೂಚನಾ ಫಲಕಗಳು ಅಥವಾ ಎಚ್ಚರಿಕೆ ವ್ಯವಸ್ಥೆಗಳನ್ನು ಅಳವಡಿಸಿರಲಿಲ್ಲ. ಇದೇ ಕಾರಣದಿಂದಾಗಿ ರಸ್ತೆ ಮೂಲಕ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಹೊಂಡಕ್ಕೆ ಬಿದ್ದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.


ಅಪಘಾತದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿಸಿದರು. ಬಳಿಕ ಗಂಭೀರ ಸ್ಥಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.


ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಪಾಯ ತಪ್ಪಿದ್ದರೆ ಇನ್ನಷ್ಟು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸಂಬಂಧಿಸಿದ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ರಸ್ತೆಯಲ್ಲಿನ ಕಾಮಗಾರಿಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ನಡೆಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

About The Author