Two motorcyclists were seriously injured in a head-on collision between a TVS XL and a Bajaj Pulsar near Doona village, close to Ripponpet in Shivamogga district. Police have launched an investigation into the accident.
ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ದೂನ ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ದೂನ ಸಮೀಪದ ನರ್ಸರಿ ಮುಂಭಾಗದಲ್ಲಿ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಬಜಾಜ್ ಪಲ್ಸರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಟಿವಿಎಸ್ ಎಕ್ಸೆಲ್ ಬೈಕ್ ಸವಾರರಾದ ಗುಬ್ಬಿಗ ಗ್ರಾಮದ ಸತ್ಯನಾರಾಯಣ್ ಭಟ್ ಅವರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ಭಾರೀ ರಕ್ತಸ್ರಾವವಾಗಿದೆ. ಇನ್ನೊಂದೆಡೆ ಪಲ್ಸರ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಹೊಸನಗರ ಸಮೀಪದ ಜಯನಗರ ನಿವಾಸಿ ರಾಕೇಶ್ (27) ಎಂಬಾತನಿಗೆ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಮಾಹಿತಿ ಪಡೆದ ರಿಪ್ಪನ್‌ಪೇಟೆ ಪಿಎಸ್ಐ ರಾಜುರೆಡ್ಡಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್