Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road
ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ (KA 42 A 4198)ಯನ್ನು ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗೆ ಅಂದಾಸುರ ಹಾಗೂ ಕೊರ್ಲಿಕೊಪ್ಪ ಪ್ರದೇಶದಲ್ಲಿ ಅಕ್ರಮ ಮರಳು ಸಾಗಣೆ ಬಗ್ಗೆ ಮಾಹಿತಿ ನೀಡಿದ್ದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಹಿನ್ನಲೆಯಲ್ಲಿ ಈ ಭಾಗದಲ್ಲಿ ಸಕ್ರಿಯವಾಗಿರುವ ಮರಳು ದಂಧೆಕೋರರ ವಿರುದ್ಧ ಪೊಲೀಸರು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಅಕ್ರಮ ಮರಳು ಸಾಗಣೆ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…