ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete.

ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಸಮೀಪದ ತಳಲೆ ಗ್ರಾಮದಲ್ಲಿ ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಿಂದ ಸಮಾಜದಲ್ಲಿ ನೈತಿಕತೆ ವೃದ್ಧಿಯಾಗುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವ ಯುವಕರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಸಂಘಟನೆ ಹಾಗೂ ಶಿಸ್ತು ರೂಪುಗೊಳ್ಳುತ್ತದೆ ಎಂದು ಹೇಳಿದರು.

ಇಂದಿನ ಗ್ರಾಮೀಣ ಯುವಕರು ಮೊಬೈಲ್ ಮತ್ತು ಟಿವಿಯ ಪ್ರಭಾವದಿಂದ ಕ್ರೀಡೆಗಳಿಂದ ದೂರವಾಗುತ್ತಿದ್ದಾರೆ. ಅಜಾಗರೂಕತೆಯಿಂದ ಅನಾರೋಗ್ಯಕರ ಆಹಾರ ಸೇವನೆಯೂ ಹೆಚ್ಚಾಗಿದೆ. ಕ್ರೀಡೆ ದೇಹಾರೋಗ್ಯ ಕಾಪಾಡಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಉತ್ತಮ ಆಹಾರ ಮತ್ತು ಕ್ರೀಡಾಸಕ್ತಿಯಿಂದ ಆರೋಗ್ಯವಂತ ಜೀವನ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕ್ರೀಡಾಪ್ರೇಮಿ ವಿಜಯ ಮಳವಳ್ಳಿ ಮಾತನಾಡಿ, ಇಂದು ಕ್ರೀಡೆ ಕ್ರಿಕೆಟ್‌ಗೆ ಮಾತ್ರ ಸೀಮಿತವಾಗಿದೆ. ದೈಹಿಕ ಕಸರತ್ತು ಮತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸುವ ಅನೇಕ ಗ್ರಾಮೀಣ ಆಟಗಳು ಮರೆಯಾಗುತ್ತಿವೆ. ಹಳ್ಳಿಗಳಲ್ಲಿನ ಪ್ರತಿಭೆಗಳಿಗೆ ಸರಿಯಾದ ಅವಕಾಶ, ಪ್ರಚಾರ ಮತ್ತು ಮಾರ್ಗದರ್ಶನ ಸಿಗದ ಕಾರಣ ಅವು ಬೆಳೆಯದೇ ಉಳಿಯುತ್ತಿವೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಕ್ರೀಡಾಕೂಟಗಳು ನಡೆದರೆ ಪ್ರತಿಭೆಗಳಿಗೆ ವೇದಿಕೆ ದೊರೆಯುತ್ತದೆ ಎಂದರು.

ಪಂದ್ಯಾವಳಿಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವೀರಭದ್ರಪ್ಪ (ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ), ಗಣಪತಿ (ನಿವೃತ್ತ ಶಿಕ್ಷಕ), ಭೋಜಪ್ಪ ಬಿ. (ರಾಷ್ಟ್ರ ಪ್ರಶಸ್ತಿ ಪುರಸ್ಕೃತ), ಶಿಲ್ಪಾ (ಜಿಲ್ಲಾ ಅತ್ಯುತ್ತಮ ಶಿಕ್ಷಕಿ), ಗಂಗಾಧರ (ಮೆಸ್ಕಾಂ ನೌಕರ), ಸೊನಾಲಿ (ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಪಟು) ಮತ್ತು ಆಯಿಶ್ರೀ (ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಪಟು) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೇಯಸ್ ಚೂಡಾಮಣಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪಿಎಸ್‌ಐ ರಾಜು ರೆಡ್ಡಿ, ಗ್ರಾಮ ಪಂಚಾಯತ್ ಸದಸ್ಯರಾದ ನಾಗರತ್ನ ಶ್ಯಾಮಸುಂದರ್, ವಿಶುಕುಮಾರ್, ದಿನೇಶ್ ಗೌಡ್ರು ಹೊಳೇನಕೊಪ್ಪ, ದೇವರಾಜ್ ಮಳವಳ್ಳಿ, ಚೇತನ್ ವರನಹೊಂಡ, ಸಾಮಾಜಿಕ ಕಾರ್ಯಕರ್ತ ಕಗ್ಗಲಿ ಲಿಂಗಪ್ಪ,ಚಿಗುರು ಶ್ರೀಧರ್, ಪ್ರವೀಣ್ ಸುಳಗೋಡು, ಬೇಕರಿ ಸುರೇಶ್, ಚಂದ್ರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದುರ್ಗಾಪರಮೇಶ್ವರಿ ವಾಲಿಬಾಲ್ ಕ್ಲಬ್ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಆಸೀಫ್ ಮೂಗುಡ್ತಿ, ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ರಾಕೇಶ್ (ಕಗ್ಗಲಿ), ಅರುಣ್, ವಿಜಯ್ ರಾಜ್ ಹಾಗೂ ಕ್ಲಬ್‌ನ ಎಲ್ಲಾ ಸದಸ್ಯರು ಮತ್ತು ಗ್ರಾಮಸ್ಥರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

1 hour ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

2 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

6 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

6 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

20 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

20 hours ago