POSTMANNEWS

ನೈಜ ಸುದ್ದಿ ನೇರ ಬಿತ್ತರ..

ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮನವಿ

A delegation led by MLA Gopalakrishna Beluru submitted a memorandum to Chief Minister Siddaramaiah demanding the formation of Sagara as a separate district from Shivamogga.

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಮುನ್ನುಡಿ ಬರೆಯಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತ ಮನವಿ ಸಲ್ಲಿಸಿದೆ.

ಕಳೆದ ಕೆಲವು ತಿಂಗಳುಗಳಿಂದ ಸಾಗರದಲ್ಲಿ ಜಿಲ್ಲಾ ರಚನೆಗಾಗಿ ನಿರಂತರ ಹೋರಾಟಗಳು ನಡೆಯುತ್ತಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಅವರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿಯೋಗವು ಮನವಿ ಮಾಡಿತು. ಭೌಗೋಳಿಕ ವಿಸ್ತೀರ್ಣ, ಆಡಳಿತಾತ್ಮಕ ಸೌಲಭ್ಯ ಹಾಗೂ ಜನಸಂಖ್ಯೆಯ ದೃಷ್ಟಿಯಿಂದ ಸಾಗರವನ್ನು ಜಿಲ್ಲೆಗೊಳಿಸುವುದು ಅನಿವಾರ್ಯವಾಗಿದೆ ಎಂದು ನಿಯೋಗವು ಸಿಎಂ ಗಮನಕ್ಕೆ ತಂದಿತು.

ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಾಗರ ಜಿಲ್ಲೆ ರಚನೆ ಕುರಿತಂತೆ ತಾವು ಉತ್ಸುಕರಾಗಿದ್ದೇವೆ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಸೂಕ್ತ ಕ್ರಮ ವಹಿಸುವ ಭರವಸೆಯನ್ನೂ ಅವರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್, ಮಾಜಿ ಎಂಎಲ್ಸಿ ಪ್ರಫುಲ್ಲಾ ಮಧುಕರ್, ಮಾಜಿ ಪುರಸಭಾ ಅಧ್ಯಕ್ಷೆ ನಂದಾ ಗೊಜನೂರು, ಹಿತಕರ್ ಜೈನ್, ಸುಂದರ್ ಸಿಂಗ್, ನಾಗರಾಜ್ ಗುಡ್ಡೇಮನೆ, ನಾಗರಾಜ್ ಎನ್.ಹೆಚ್, ಮಂಜಪ್ಪ, ತುಕಾರಾಂ ಶಿರವಾಳ, ಧರ್ಮೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

About The Author