A delegation led by MLA Gopalakrishna Beluru submitted a memorandum to Chief Minister Siddaramaiah demanding the formation of Sagara as a separate district from Shivamogga.
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಮುನ್ನುಡಿ ಬರೆಯಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತ ಮನವಿ ಸಲ್ಲಿಸಿದೆ.
ಕಳೆದ ಕೆಲವು ತಿಂಗಳುಗಳಿಂದ ಸಾಗರದಲ್ಲಿ ಜಿಲ್ಲಾ ರಚನೆಗಾಗಿ ನಿರಂತರ ಹೋರಾಟಗಳು ನಡೆಯುತ್ತಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಅವರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿಯೋಗವು ಮನವಿ ಮಾಡಿತು. ಭೌಗೋಳಿಕ ವಿಸ್ತೀರ್ಣ, ಆಡಳಿತಾತ್ಮಕ ಸೌಲಭ್ಯ ಹಾಗೂ ಜನಸಂಖ್ಯೆಯ ದೃಷ್ಟಿಯಿಂದ ಸಾಗರವನ್ನು ಜಿಲ್ಲೆಗೊಳಿಸುವುದು ಅನಿವಾರ್ಯವಾಗಿದೆ ಎಂದು ನಿಯೋಗವು ಸಿಎಂ ಗಮನಕ್ಕೆ ತಂದಿತು.
ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಾಗರ ಜಿಲ್ಲೆ ರಚನೆ ಕುರಿತಂತೆ ತಾವು ಉತ್ಸುಕರಾಗಿದ್ದೇವೆ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಸೂಕ್ತ ಕ್ರಮ ವಹಿಸುವ ಭರವಸೆಯನ್ನೂ ಅವರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್, ಮಾಜಿ ಎಂಎಲ್ಸಿ ಪ್ರಫುಲ್ಲಾ ಮಧುಕರ್, ಮಾಜಿ ಪುರಸಭಾ ಅಧ್ಯಕ್ಷೆ ನಂದಾ ಗೊಜನೂರು, ಹಿತಕರ್ ಜೈನ್, ಸುಂದರ್ ಸಿಂಗ್, ನಾಗರಾಜ್ ಗುಡ್ಡೇಮನೆ, ನಾಗರಾಜ್ ಎನ್.ಹೆಚ್, ಮಂಜಪ್ಪ, ತುಕಾರಾಂ ಶಿರವಾಳ, ಧರ್ಮೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…
ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…