A senior veterinary officer, Dr. Sunil (38), drowned while swimming in the Sharavathi backwaters near Sagara in Shivamogga district on January 11.
ಸಾಗರ | ಜನವರಿ 11: ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶುವೈದ್ಯಾಧಿಕಾರಿಯೊಬ್ಬರು ಆಕಸ್ಮಿಕವಾಗಿ ನೀರುಪಾಲಾಗಿ ಮೃತಪಟ್ಟ ದಾರುಣ ಘಟನೆ ಸಾಗರ ತಾಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಸಮೀಪ ಭಾನುವಾರ (ಜನವರಿ 11) ನಡೆದಿದೆ.
ಮೃತರನ್ನು ಡಾ. ಸುನೀಲ್ (38) ಎಂದು ಗುರುತಿಸಲಾಗಿದ್ದು, ಇವರು ಮಾಸೂರಿನಲ್ಲಿ ಹಿರಿಯ ಪಶು ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಭಾನುವಾರ ಕರ್ತವ್ಯಕ್ಕೆ ರಜೆಯಿದ್ದ ಹಿನ್ನೆಲೆ ಮಧ್ಯಾಹ್ನ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕಾಗಿ ಶರಾವತಿ ಹಿನ್ನೀರು ಪ್ರದೇಶಕ್ಕೆ ಬಂದಿದ್ದ ಡಾ. ಸುನೀಲ್, ಈಜಲು ತೆರಳಿದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳವು ಹಲವು ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೆ ನೀರಿನಿಂದ ಮೃತದೇಹವನ್ನು ಹೊರತೆಗೆದಿದೆ.
ಶೋಧ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ವಿನಾಯಕ ಹೆಗ್ಗೆನಾಯಕ, ಲೀಡಿಂಗ್ ಫೈರ್‌ಮ್ಯಾನ್‌ಗಳಾದ ರಾಜೇಂದ್ರ ಡಿ.ಬಿ., ಗಣೇಶ್ ಆರ್. ಶೇಟ್, ಸಿಬ್ಬಂದಿಗಳಾದ ವಿಶ್ವನಾಥ ರೆಡ್ಡಿ, ಶಿವಕುಮಾರ್ ಡಿ., ಸತೀಶ್ ಕುಮಾರ್, ಜಯಂತ್ ಭಾಗವಹಿಸಿದ್ದರು.
ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…
ಅಕ್ರಮ ವಿದ್ಯುತ್ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…