SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ
ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಡಿಸೆಂಬರ್ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು. ಬಳಿಕ ಪ್ರಭುಲಿಂಗ ಕವಲಿಕಟ್ಟಿ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು.