ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??
A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident.
ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ‘ಶ್ರೀ ಅನ್ನಪೂರ್ಣೇಶ್ವರಿ’ ಎಂಬ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಚಾಲಕ ಸೇರಿದಂತೆ ಸುಮಾರು 40 ಜನ ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡುದನ್ನು ಗಮನಿಸಿದ ಚಾಲಕ, ತಕ್ಷಣವೇ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ್ದಾನೆ. ಈ ವೇಳೆ ಗದ್ದಲ ಉಂಟಾಗಿ ಕೆಲವರು ಬಸ್‌ನಿಂದ ಜಿಗಿದು ರಕ್ಷಣೆ ಪಡೆದಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಚಲಿಸುತಿದ್ದ ಬಸ್ಸಿನಲ್ಲಿ ಮೊದಲು ಸುಟ್ಟ ವಾಸನೆ ಬರುತಿದ್ದು ಕೆಲಕ್ಷಣಗಳಲ್ಲೇ ಕೆಲವರು ಕಿರುಚುವ ಧ್ವನಿಕೇಳಿಸಿದೆ ಆ ನಂತರ ಎಕ್ಸಿಟ್ ಡೋರ್ ಮೂಲಕ ಹೊರಗೆ ಬಂದೆವು ಎನ್ನುತ್ತಾರೆ.
ಘಟನೆಯಲ್ಲಿ ಒಟ್ಟು ಮೂವತ್ತು ಜನರಿಗೆ ಗಾಯಗಳಾಗಿದ್ದು , ಎಂಟಕ್ಕೂ ಹೆಚ್ಚು ಜನರಿಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಯಾಣಿಕರ ಲಗೇಜ್ ಗಳು ಬೆಂಕಿಗೆ ಅಹುತಿಯಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಅಂಬುಲೆನ್ಸ್ ಹಾಗೂ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು,ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಗಾಯಾಳುಗಳಿ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.















