Shivamogga traffic police launched a unique road safety campaign by gifting free helmets to youth riding without helmets instead of imposing fines.
ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ.
ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ ಎ.ಎ. ವೃತ್ತದಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಸಿದರು. ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಸವಾರರನ್ನು ತಡೆದ ಪೊಲೀಸರು, ದಂಡ ವಿಧಿಸುವ ಬದಲು ಅವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿದರು.
ಈ ವೇಳೆ ಹೊಸ ಬೈಕ್ನಲ್ಲಿ ಹೆಲ್ಮೆಟ್ ಇಲ್ಲದೆ ಬಂದ ಯುವಕರಿಗೆ ಅಪಘಾತದ ಸಂದರ್ಭಗಳಲ್ಲಿ ಹೆಲ್ಮೆಟ್ ಹೇಗೆ ಅಮೂಲ್ಯವಾದ ಜೀವ ರಕ್ಷಕವಾಗುತ್ತದೆ ಎಂಬ ಬಗ್ಗೆ ವಿವರವಾಗಿ ಅರಿವು ಮೂಡಿಸಲಾಯಿತು. ಬಳಿಕ ಪೊಲೀಸ್ ಇಲಾಖೆಯ ಖರ್ಚಿನಲ್ಲೇ ಹೊಸ ಹೆಲ್ಮೆಟ್ ನೀಡುವ ಮೂಲಕ ಸಂಚಾರ ನಿಯಮಗಳ ಮಹತ್ವವನ್ನು ಬೋಧಿಸಿದರು.
ಸಂಚಾರಿ ಪೊಲೀಸರ ಈ ವಿಭಿನ್ನ ಹಾಗೂ ಮಾನವೀಯ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ರಸ್ತೆ ಸುರಕ್ಷತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ಅಭಿಯಾನ ಮಹತ್ವದ ಪಾತ್ರ ವಹಿಸಿದೆ.
Shivamogga traffic police , Free helmet distribution, Road safety drive, Helmet awareness campaign, Traffic police initiative,
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್