January 11, 2026

ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation.

ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ.

ಸುಬ್ರಹ್ಮಣ್ಯ ಅವರು ತಮ್ಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೂಡೂರು ಗೇಟ್ ಸಮೀಪ ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಸುಬ್ರಹ್ಮಣ್ಯ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author