Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life.
ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ
ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ 24 ಗಂಟೆಯೊಳಗೆ ಪತ್ತೆಹಚ್ಚುವಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಸೂಡೂರು ಗೇಟ್ ಬಳಿ ಬೈಕ್‌ಗೆ ಹಿಂಬದಿಯಿಂದ ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಣಗೆರೆ ಕಟ್ಟೆ ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ದುರ್ಘಟನೆ ಹಿನ್ನೆಲೆಯಲ್ಲಿ ಪೊಲೀಸರು ತ್ವರಿತ ತನಿಖೆ ನಡೆಸಿ ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಿದ್ದಾರೆ.
ತನಿಖೆಯಲ್ಲಿ, ಕಲ್ಲುಪುಡಿ ಸಾಗಿಸುತ್ತಿದ್ದ ಹತ್ತು ಚಕ್ರದ ಲಾರಿ (ನೋಂದಣಿ ಸಂಖ್ಯೆ: KA 16 C 0275) ಸುಬ್ರಹ್ಮಣ್ಯ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಘಟನೆಯ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆ ನಡೆದ 24 ಗಂಟೆಯೊಳಗೆ ಲಾರಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ್ ಹಾಗೂ ಅವಿನಾಶ್ ಭಾಗವಹಿಸಿದ್ದರು.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…