A shocking crime from Telangana where a nurse allegedly murdered her parents by administering an overdose of anesthesia after they opposed her inter-caste love marriage.
ತೆಲಂಗಾಣದಲ್ಲಿ ಮಗಳೇ ತನ್ನ ತಂದೆ–ತಾಯಿಗೆ ನಿದ್ರಾಜನಕ ಇಂಜೆಕ್ಷನ್ ನೀಡಿ ಕೊಲೆಗೈದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬಾಯ್‌ಫ್ರೆಂಡ್ ಜೊತೆ ಮದುವೆಗೆ ಪೋಷಕರು ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ, ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಗಳು ತನ್ನ ವೃತ್ತಿಪರ ಜ್ಞಾನವನ್ನು ದುರುಪಯೋಗಪಡಿಸಿಕೊಂಡು ಈ ಕೃತ್ಯ ಎಸಗಿದ್ದಾಳೆ.
ಆರೋಪಿ ನಕ್ಕಲ ಸುರೇಖಾ, ಸಂಗಾರೆಡ್ಡಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ತಂದೆ ದಶರಥ (58) ಮತ್ತು ತಾಯಿ ಲಕ್ಷ್ಮಿ (54) ಅವರಿಗೆ ‘ಮೈ–ಕೈ ನೋವು’ ಎಂದು ಹೇಳಿ ಅನಸ್ತೇಶಿಯಾ ನೀಡಿದ್ದಾಳೆ. ಆದರೆ, ಚಿಕಿತ್ಸೆ ನೆಪದಲ್ಲಿ ನೀಡಲಾದ ಇಂಜೆಕ್ಷನ್ ಮಿತಿಮೀರಿದ ಪ್ರಮಾಣದಲ್ಲಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾರಂ ಪೊಲೀಸ್ ಠಾಣೆಯ ಮಾಹಿತಿ ಪ್ರಕಾರ, ಸುರೇಖಾ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು. ಆತ ಬೇರೆ ಜಾತಿಗೆ ಸೇರಿದವನಾಗಿದ್ದರಿಂದ ಪೋಷಕರು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನೆಯಲ್ಲಿ ನಿರಂತರ ಕಲಹ ನಡೆಯುತ್ತಿತ್ತು.
ಈ ವಿರೋಧದಿಂದ ಕೋಪಗೊಂಡ ಸುರೇಖಾ, ತನ್ನ ನರ್ಸಿಂಗ್ ಕೌಶಲ ಬಳಸಿ ಸಂಶಯವಿಲ್ಲದೆ ಪೋಷಕರನ್ನು ಕೊಲ್ಲುವ ಸಂಚು ರೂಪಿಸಿದ್ದಾಳೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಜನವರಿ 24ರ ರಾತ್ರಿ, ನೋವಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ‘ಆರ್ಟಾಸಿಲ್ (Artacil)’ ಎಂಬ ನಿದ್ರಾಜನಕ ಔಷಧವನ್ನು ಅಧಿಕ ಪ್ರಮಾಣದಲ್ಲಿ ಇಂಜೆಕ್ಟ್ ಮಾಡಿ ಪೋಷಕರ ಜೀವ ಹರಣ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಸಂಬಂಧ ಪೊಲೀಸರು ಸುರೇಖಾವನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಪ್ರಕರಣ ರಾಜ್ಯಾದ್ಯಂತ ಭಾರೀ ಆಘಾತ ಮೂಡಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…