A third-year rural-level floodlight volleyball tournament is being organized today (Jan 3) at Thalale village near Ripponpete by the Sri Durga Parameshwari Volleyball Club. As part of the event, achievers from various fields, including retired teachers, award recipients, and national-level athletes, will be felicitated. Attractive prizes have been announced, and the organizers have invited players and the public to participate in large numbers.
RIPPONPETE | ತಳಲೆಯಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಸಾಧಕರಿಗೆ ಸನ್ಮಾನ
ರಿಪ್ಪನ್ ಪೇಟೆ: ಸಮೀಪದ ತಳಲೆ ಗ್ರಾಮದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ವಾಲಿಬಾಲ್ ಕ್ಲಬ್ ವತಿಯಿಂದ 3ನೇ ವರ್ಷದ ಗ್ರಾಮಾಂತರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಇಂದು (ಜ.3) ನಡೆಯಲಿದೆ.
ಪಂದ್ಯಾವಳಿಯೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಿವೃತ್ತ ಶಿಕ್ಷಕರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ಸನ್ಮಾನಿಸಲಾಗುವುದು. ವಿಜೇತ ತಂಡಗಳಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿದೆ.
ಕ್ಲಬ್ ಅಧ್ಯಕ್ಷ ಶ್ರೇಯಸ್ ಚೂಡಾಮಣಿ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ಹಾಗೂ ಗ್ರಾಮಸ್ಥರ ಸಹಕಾರದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್