POSTMANNEWS

ನೈಜ ಸುದ್ದಿ ನೇರ ಬಿತ್ತರ..

ಖಾತೆ ಬದಲಾವಣೆಗೆ 4 ಲಕ್ಷ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಖಾತೆ ಬದಲಾವಣೆಗೆ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

A Village Accountant was caught red-handed by Lokayukta police while accepting a ₹1 lakh bribe at a government employees’ canteen in Shikaripur, linked to a land khata transfer case.

ಶಿಕಾರಿಪುರ: ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಚಿಕ್ಕಜಂಬೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಅವರು ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ ₹1 ಲಕ್ಷ ಲಂಚ ಪಡೆಯುವ ವೇಳೆ ಬಂಧಿತರಾಗಿದ್ದಾರೆ.

ಚಿಕ್ಕಜಂಬೂರು ಗ್ರಾಮದ ಜಿಕ್ರಿಯಾ ಬೇಗ್ ಅವರು ತಮ್ಮ ತಂದೆಯ ವಿಲ್‌ಪತ್ರದ ಆಧಾರದಲ್ಲಿ ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಮುಗಿಸಲು ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಅವರು ಒಟ್ಟು ₹4 ಲಕ್ಷ ಲಂಚ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಮೊದಲ ಕಂತಾಗಿ ₹1 ಲಕ್ಷವನ್ನು ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ ನೀಡುವಂತೆ ಸೂಚಿಸಿದ್ದರು ಎನ್ನಲಾಗಿದೆ.

ಲಂಚ ಬೇಡಿಕೆ ಸಂಬಂಧ ಜಿಕ್ರಿಯಾ ಬೇಗ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ನಿಗದಿತ ಸ್ಥಳದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಬಂಧನದ ಬಳಿಕ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಸರ್ಕಾರಿ ಅಧಿಕಾರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಇಂತಹ ದಾಳಿಗಳನ್ನು ಮುಂದುವರಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

About The Author