A leopard’s dead body was found in village of Hosanagar taluk. Post-mortem revealed the leopard was around five years old, with a suspected natural death.
ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತ ಚಿರತೆ ಸುಮಾರು ಐದು ವರ್ಷದ ಪ್ರಾಯದ್ದಾಗಿದ್ದು, ಮೇಲ್ನೋಟಕ್ಕೆ ಇದು ಸ್ವಾಭಾವಿಕ ಸಾವಾಗಿರಬಹುದೆಂದು ಅರಣ್ಯ ಇಲಾಖೆ ತಿಳಿಸಿದೆ.
ಈ ಕುರಿತು ಆರ್‌ಎಫ್‌ಒ ಸಂತೋಷ ಮಲ್ಲನಗೌಡ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಶುವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಲಭ್ಯವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಮೃತದೇಹ ಪತ್ತೆಯಾದ ಸ್ಥಳದಲ್ಲೇ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಯಿತು.
ಈ ವೇಳೆ ತಹಸೀಲ್ದಾರ್ ಭರತ್ ರಾಜ್, ಎಸಿಎಫ್ ಮೋಹನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
