w
Headlines
Home » ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

Screenshot 2026 02 17 18 20 23 135 com.miui.gallery edit

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes.

ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಮೊಬೈಲ್‌ನಲ್ಲಿ ಕಾಣಿಸಿಕೊಂಡ ಜಾಹೀರಾತೊಂದರಲ್ಲಿ ಸ್ಟಾಕ್ ಟ್ರೇಡಿಂಗ್ ಹಾಗೂ ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ಪ್ರಚಾರ ಮಾಡಲಾಗಿತ್ತು. ಇದನ್ನು ನಂಬಿದ ಸಂತ್ರಸ್ತರು ಜನವರಿ 26 ರಿಂದ ಫೆಬ್ರವರಿ 10ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 12.15 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ.

ನಂತರ ಹೂಡಿಕೆ ಮಾಡಿದ ಹಣದಲ್ಲಿ 10 ಲಕ್ಷ ರೂ. ಹಿಂಪಡೆಯಲು ಯತ್ನಿಸಿದಾಗ ತಾಂತ್ರಿಕ ತೊಂದರೆ ಎಂದು ತಿಳಿಸಲಾಗಿದೆ. ವಂಚಕರನ್ನು ಸಂಪರ್ಕಿಸಿದ ವೇಳೆ, ಸಂಪೂರ್ಣ ಹಣ ಬಿಡುಗಡೆಗೆ ಒಟ್ಟು ಮೊತ್ತದ 30 ಶೇಕಡಾ ‘ಹ್ಯಾಂಡ್ಲಿಂಗ್ ಚಾರ್ಜ್’ ಪಾವತಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡ ಸಂತ್ರಸ್ತರು ಪರಿಚಯಸ್ಥರೊಂದಿಗೆ ವಿಚಾರಿಸಿದಾಗ ತಾವು ವಂಚನೆಗೆ ಒಳಗಾಗಿರುವುದು ದೃಢಪಟ್ಟಿದೆ.

ತಕ್ಷಣವೇ ಎಚ್ಚೆತ್ತುಕೊಂಡ ಅವರು ಶಿವಮೊಗ್ಗ ಸೈಬರ್ ಪೊಲೀಸರಿಗೆ ದೂರು ಸಲ್ಲಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.