ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು
A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes.
ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಮೊಬೈಲ್ನಲ್ಲಿ ಕಾಣಿಸಿಕೊಂಡ ಜಾಹೀರಾತೊಂದರಲ್ಲಿ ಸ್ಟಾಕ್ ಟ್ರೇಡಿಂಗ್ ಹಾಗೂ ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ಪ್ರಚಾರ ಮಾಡಲಾಗಿತ್ತು. ಇದನ್ನು ನಂಬಿದ ಸಂತ್ರಸ್ತರು ಜನವರಿ 26 ರಿಂದ ಫೆಬ್ರವರಿ 10ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 12.15 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ.
ನಂತರ ಹೂಡಿಕೆ ಮಾಡಿದ ಹಣದಲ್ಲಿ 10 ಲಕ್ಷ ರೂ. ಹಿಂಪಡೆಯಲು ಯತ್ನಿಸಿದಾಗ ತಾಂತ್ರಿಕ ತೊಂದರೆ ಎಂದು ತಿಳಿಸಲಾಗಿದೆ. ವಂಚಕರನ್ನು ಸಂಪರ್ಕಿಸಿದ ವೇಳೆ, ಸಂಪೂರ್ಣ ಹಣ ಬಿಡುಗಡೆಗೆ ಒಟ್ಟು ಮೊತ್ತದ 30 ಶೇಕಡಾ ‘ಹ್ಯಾಂಡ್ಲಿಂಗ್ ಚಾರ್ಜ್’ ಪಾವತಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡ ಸಂತ್ರಸ್ತರು ಪರಿಚಯಸ್ಥರೊಂದಿಗೆ ವಿಚಾರಿಸಿದಾಗ ತಾವು ವಂಚನೆಗೆ ಒಳಗಾಗಿರುವುದು ದೃಢಪಟ್ಟಿದೆ.
ತಕ್ಷಣವೇ ಎಚ್ಚೆತ್ತುಕೊಂಡ ಅವರು ಶಿವಮೊಗ್ಗ ಸೈಬರ್ ಪೊಲೀಸರಿಗೆ ದೂರು ಸಲ್ಲಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್