ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ

In Shivamogga, Akka Pada police team caught a man red-handed for stalking a hostel student for over three months. A petty case was registered and a strict warning was issued. Police have warned of strict action against harassment of women in public places.

ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ

ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯನ್ನು ನಿರಂತರವಾಗಿ ಹಿಂಬಾಲಿಸುತ್ತಿದ್ದ ಆರೋಪಿಯನ್ನು ಅಕ್ಕಪಡೆ ಕಾರ್ಯಾಚರಣೆ ಮೂಲಕ ರೆಡ್‌ಹ್ಯಾಂಡ್ ಆಗಿ ಹಿಡಿದು ಠಾಣೆಗೆ ಕರೆತಂದು ಕೇಸ್ ದಾಖಲಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಕಳೆದ ಮೂರು ತಿಂಗಳಿಂದ ವ್ಯಕ್ತಿಯೊಬ್ಬ ಹಾಸ್ಟೆಲ್‌ನ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಮಾಹಿತಿ ಅಕ್ಕಪಡೆಗೆ ಲಭ್ಯವಾಗಿತ್ತು. ಶಾಲೆ–ಹಾಸ್ಟೆಲ್‌ಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ವೇಳೆ ಈ ವಿಷಯ ತಿಳಿದ ಬಳಿಕ ಅಕ್ಕಪಡೆ ತಂಡ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯಲು ಕಾರ್ಯಾಚರಣೆ ರೂಪಿಸಿತು. ಅದರಂತೆ ಫೆಬ್ರವರಿ 3ರಂದು ಬೆಳಿಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದರು.

ಠಾಣೆಯಲ್ಲಿ ವಿಚಾರಣೆ ನಡೆಸಿದ ಪೊಲೀಸರು ಆರೋಪಿಯ ವಿರುದ್ಧ ಪೆಟ್ಟಿ ಕೇಸ್ ದಾಖಲಿಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ನಗರದಲ್ಲಿ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಗೆ ಅನಗತ್ಯವಾಗಿ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಅಕ್ಕಪಡೆ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ತೊಂದರೆ ನೀಡುವುದು, ಹಿಂಬಾಲಿಸುವುದು ಅಥವಾ ಅಸಭ್ಯವಾಗಿ ವರ್ತಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಇಂತಹ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

9 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago