ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ನೋವು ನನಗೂ ಗೊತ್ತು – ಶಾಸಕ ಆರಗ ಜ್ಞಾನೇಂದ್ರ

Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms.

ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ನಗರದ ಊರಗಡೂರಿನಲ್ಲಿ ಇತ್ತೀಚೆಗೆ ಹತ್ಯೆಗೀಡಾದ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮೃತ ವಿದ್ಯಾರ್ಥಿಯ ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಕ್ಕಳನ್ನು ಕಳೆದುಕೊಂಡಾಗ ಆಗುವ ನೋವು ಅಸಹನೀಯ. ಇಲ್ಲಿ ಎದೆ ಎತ್ತರಕ್ಕೆ ಬೆಳೆದ ಮಗನನ್ನು ಕಳೆದುಕೊಂಡು, ಅವನ ಭವಿಷ್ಯದ ಬಗ್ಗೆ ಕನಸು ಕಟ್ಟಿಕೊಂಡಿದ್ದ ಪೋಷಕರ ಕನಸು ಭಗ್ನಗೊಂಡಿದೆ” ಎಂದು ಹೇಳಿದರು.

ಈ ಪ್ರಕರಣದಲ್ಲಿ ಆರೋಪಿಗಳು ಅಪ್ರಾಪ್ತರಾಗಿದ್ದಾರೆ ಎಂಬ ಕಾರಣಕ್ಕೆ ಯಾವುದೇ ರಿಯಾಯಿತಿ ನೀಡಬಾರದು ಎಂದು ಆಗ್ರಹಿಸಿದ ಅವರು, ಸರ್ಕಾರ ತಕ್ಷಣವೇ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಿ ಕಾನೂನು ಹೋರಾಟ ನಡೆಸಬೇಕು ಎಂದರು.

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿ ತುಂಬಾ ದೊಡ್ಡದಾಗಿರುವುದರಿಂದ ಹೊಸ ಪೊಲೀಸ್ ಠಾಣೆ ಸ್ಥಾಪನೆಯ ಅಗತ್ಯವಿದೆ ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ತುಷ್ಟೀಕರಣ ನೀತಿಗಳಿಂದಾಗಿ ಅಕ್ರಮ ದಂಧೆಗಳು ಹಾಗೂ ಗಾಂಜಾ ಹಾವಳಿ ಶಿವಮೊಗ್ಗದಲ್ಲಿ ಹೆಚ್ಚಾಗಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತ ಪ್ರದೇಶಗಳಿಗೆ ಹೋಗಲು ಪೊಲೀಸರು ಹಿಂಜರಿಯುತ್ತಿದ್ದಾರೆ ಹಾಗೂ ಕೆಲವು ಪೊಲೀಸ್ ಸಿಬ್ಬಂದಿ ಅಕ್ರಮ ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ಮಾಡಿದರು. ಇಂತಹ ಸಿಬ್ಬಂದಿಯನ್ನು ತಕ್ಷಣ ವರ್ಗಾವಣೆ ಮಾಡದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ ಎಂದು ಅವರು ಎಚ್ಚರಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

4 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

4 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

5 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

6 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

13 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

14 hours ago