Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here.
ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ
ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿದೆ.
ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿಯಾಗಿದ್ದಾರೆ.
ಘಟನೆಯ ವಿವರ:
ಆರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ (ASIM) ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.
ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು.
ನ್ಯಾಯಾಂಗ ಬಂಧನ:
ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…