w
Headlines
Home » ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ

ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ

GridArt 20260216

Four persons were detained by Belthangady police for illegally hunting turtles from a river to prepare turtle curry for a grandmother’s death ceremony. Turtles were seized and the case was handed over to the Forest Department for further action.

ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ

ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಅವರು ಬಹಳ ಇಷ್ಟಪಟ್ಟಿದ್ದ ಆಮೆ ಸಾರು ತಯಾರಿಸಿ ಬಡಿಸಲು ಯತ್ನಿಸಿದ ಪ್ರಕರಣದಲ್ಲಿ, ಆಮೆಗಳನ್ನು ಅಕ್ರಮವಾಗಿ ಬೇಟೆಯಾಡುತ್ತಿದ್ದ ನಾಲ್ವರನ್ನು ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಅಂಚೆ–ಪೆರ್ಡಲ್ ಗ್ರಾಮದ ನಿರ್ಜಲ್ ನಿವಾಸಿ ಮಣಿಕಂಠ (42), ಮಂಗಳೂರು ನಗರದ ಮುಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ (54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್ (32) ಹಾಗೂ ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್ (35) ಎಂದು ಗುರುತಿಸಲಾಗಿದೆ.

ದಾಳಿ ವೇಳೆ ಆರೋಪಿಗಳಿಂದ ನಾಲ್ಕು ಸುಟ್ಟ ಆಮೆಗಳು ಜಪ್ತಿ ಮಾಡಲಾಗಿದ್ದು, ಮುಂದಿನ ತನಿಖೆಗಾಗಿ ಪ್ರಕರಣವನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಪೊಲೀಸರ ಮಾಹಿತಿಯಂತೆ, ಫೆಬ್ರವರಿ 13ರಂದು ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ ಸಂಬಂಧಿ ಅಜ್ಜಿ ದೇವಮ್ಮ ಅವರ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಜ್ಜಿಗೆ ಇಷ್ಟವಾದ ಆಮೆ ಪದಾರ್ಥವನ್ನು ತಿಥಿ ದಿನ ಬಡಿಸಲು ತಯಾರಿ ಮಾಡಿಕೊಂಡ ಅವರು, ಫೆಬ್ರವರಿ 14ರಂದು ಸೋಮವತಿ ನದಿಯಲ್ಲಿ ಆಮೆಗಳನ್ನು ಬೇಟೆಯಾಡಲು ಬಂದಾಗ, ಆಮೆಗಳೊಂದಿಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ

ಈ ಕಾರ್ಯಾಚರಣೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯಿದ್ದು, ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ ಸಿ.ಕೆ ಮತ್ತು ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪುರ ಮಠ ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ ನೇತೃತ್ವದ ಪೊಲೀಸ್ ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ಭಾಗವಹಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.