Four persons were detained by Belthangady police for illegally hunting turtles from a river to prepare turtle curry for a grandmother’s death ceremony. Turtles were seized and the case was handed over to the Forest Department for further action.
ಅಜ್ಜಿ ತಿಥಿಗೆ ಆಮೆ ಸಾರು ತಯಾರಿ: ನಾಲ್ವರ ಬಂಧನ
ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಅವರು ಬಹಳ ಇಷ್ಟಪಟ್ಟಿದ್ದ ಆಮೆ ಸಾರು ತಯಾರಿಸಿ ಬಡಿಸಲು ಯತ್ನಿಸಿದ ಪ್ರಕರಣದಲ್ಲಿ, ಆಮೆಗಳನ್ನು ಅಕ್ರಮವಾಗಿ ಬೇಟೆಯಾಡುತ್ತಿದ್ದ ನಾಲ್ವರನ್ನು ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಅಂಚೆ–ಪೆರ್ಡಲ್ ಗ್ರಾಮದ ನಿರ್ಜಲ್ ನಿವಾಸಿ ಮಣಿಕಂಠ (42), ಮಂಗಳೂರು ನಗರದ ಮುಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ (54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್ (32) ಹಾಗೂ ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್ (35) ಎಂದು ಗುರುತಿಸಲಾಗಿದೆ.
ದಾಳಿ ವೇಳೆ ಆರೋಪಿಗಳಿಂದ ನಾಲ್ಕು ಸುಟ್ಟ ಆಮೆಗಳು ಜಪ್ತಿ ಮಾಡಲಾಗಿದ್ದು, ಮುಂದಿನ ತನಿಖೆಗಾಗಿ ಪ್ರಕರಣವನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಪೊಲೀಸರ ಮಾಹಿತಿಯಂತೆ, ಫೆಬ್ರವರಿ 13ರಂದು ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ ಸಂಬಂಧಿ ಅಜ್ಜಿ ದೇವಮ್ಮ ಅವರ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಜ್ಜಿಗೆ ಇಷ್ಟವಾದ ಆಮೆ ಪದಾರ್ಥವನ್ನು ತಿಥಿ ದಿನ ಬಡಿಸಲು ತಯಾರಿ ಮಾಡಿಕೊಂಡ ಅವರು, ಫೆಬ್ರವರಿ 14ರಂದು ಸೋಮವತಿ ನದಿಯಲ್ಲಿ ಆಮೆಗಳನ್ನು ಬೇಟೆಯಾಡಲು ಬಂದಾಗ, ಆಮೆಗಳೊಂದಿಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬಂಧಿತರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ
ಈ ಕಾರ್ಯಾಚರಣೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯಿದ್ದು, ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ ಸಿ.ಕೆ ಮತ್ತು ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪುರ ಮಠ ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ ನೇತೃತ್ವದ ಪೊಲೀಸ್ ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ಭಾಗವಹಿಸಿದ್ದರು.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…