ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ

Ripponpet town witnessed a festive atmosphere as congratulatory flex banners were displayed across major areas on the occasion of MLA Beluru Gopalakrishna’s birthday.

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ

ರಿಪ್ಪನ್‌ಪೇಟೆ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬವನ್ನು ರಿಪ್ಪನ್‌ಪೇಟೆ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಗುಡ್ ಶೆಫರ್ಡ್ ಚರ್ಚ್‌ಗೆ ತೆರಳಿ ಸಿಹಿ ವಿತರಣೆ ಮಾಡುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು.

ಅನಂತರ ವಿನಾಯಕ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಶಾಸಕರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಳಿಕ ಅಭಿಮಾನಿಗಳು ಮತ್ತು ಕಾರ್ಯಕರ್ತರು ಕಾರು ರ್ಯಾಲಿ ಮೂಲಕ ಸಾಗರದಲ್ಲಿರುವ ಶಾಸಕರ ನಿವಾಸಕ್ಕೆ ತೆರಳಿ ಶುಭಾಶಯಗಳನ್ನು ತಿಳಿಸಿದರು.

ಈ ಸಂಧರ್ಭದಲ್ಲಿ ಬೇಳೂರು ಗೋಪಾಲಕೃಷ್ಣರವರ ಅಭಿಮಾನಿಗಳು , ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಶುಭಾಶಯ ಪ್ಲೆಕ್ಸ್‌ಗಳಿಂದ ಕಂಗೊಳಿಸಿದ ರಿಪ್ಪನ್‌ಪೇಟೆ

ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಅಭಿನಂದನಾ ಪ್ಲೆಕ್ಸ್ ಬ್ಯಾನರ್‌ಗಳು ಎಲ್ಲೆಡೆ ಕಾಣಿಸಿಕೊಂಡವು.

ಪಟ್ಟಣದ ಪ್ರಮುಖ ವೃತ್ತಗಳು, ರಸ್ತೆಗಳು ಹಾಗೂ ವ್ಯಾಪಾರ ಪ್ರದೇಶಗಳಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಶುಭಾಶಯಗಳೊಂದಿಗೆ ಬ್ಯಾನರ್‌ಗಳನ್ನು ಅಳವಡಿಸಿದ್ದು, ಹುಟ್ಟುಹಬ್ಬದ ಸಂಭ್ರಮ ರಿಪ್ಪನ್‌ಪೇಟೆ ತುಂಬಾ ಉತ್ಸವದ ವಾತಾವರಣವನ್ನು ಮೂಡಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

6 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

10 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

10 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

1 day ago