A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating.
ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು ಗುರುತಿಸಲಾಗಿದೆ. ಇವರ ಪತಿ ಜಗದೀಶ್ ಅವರು ಕೆಎಸ್ಐಎಫ್ಎಸ್ನಲ್ಲಿ ಡಿ ದರ್ಜೆ ನೌಕರರಾಗಿದ್ದರು. ಶಿವರಾತ್ರಿ ದಿನದಂದು ಜಗದೀಶ್ ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವು ಪ್ರಕರಣ ದಾಖಲಾಗಿತ್ತು.
ಪತಿ ಸಾವಿನ ಆಘಾತದಿಂದ ಹೊರಬರಲಾಗದೆ ಇದ್ದ ಸ್ವಾತಿ, ಒಂದು ವಾರದೊಳಗೆ ತಾನೂ ಸಹ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಹೊಸ ತಿರುವು ನೀಡಿರುವುದು ಸ್ವಾತಿ ಅವರು ಆತ್ಮಹತ್ಯೆಗೆ ಮುನ್ನ ತಮ್ಮ ತಾಯಿಗೆ ಕಳುಹಿಸಿದ್ದ ವಾಟ್ಸಪ್ ಸಂದೇಶವಾಗಿದೆ.
ಆ ಸಂದೇಶದಲ್ಲಿ, ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ ದಫೇದಾರ್ ಆಗಿರುವ ವ್ಯಕ್ತಿಯೊಬ್ಬರು, “ನಿನ್ನ ಪತಿಯ ಸಾವಿಗೆ ನೀನೇ ಕಾರಣ” ಎಂದು ಆರೋಪಿಸಿದ್ದರೆಂದು ಉಲ್ಲೇಖಿಸಲಾಗಿದೆ. ಈ ಆರೋಪದಿಂದ ತೀವ್ರವಾಗಿ ಮನನೊಂದುಕೊಂಡಿದ್ದ ಸ್ವಾತಿ ಈ ಅತಿದೊಡ್ಡ ಹೆಜ್ಜೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್