ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ

Blind T20 World Cup champion Kavya V from Ripponpet was felicitated by Vatsalya School students at her residence in Baruve village, celebrating her contribution to India’s historic victory.

ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ

ರಿಪ್ಪನ್‌ಪೇಟೆ: ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದ ಪ್ರಮುಖ ಸದಸ್ಯೆಯಾದ ರಿಪ್ಪನ್‌ಪೇಟೆಯ ಕಾವ್ಯಾ.ವಿ ಅವರನ್ನು ಆಯನೂರಿನ ಹುಂಚದಕಟ್ಟೆ ಎಜುಕೇಷನ್ ಟ್ರಸ್ಟ್‌ ಒಡೆತನದ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಯ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.

ಭಾರತ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಗೌರವ ತಂದ ಹಿನ್ನೆಲೆಯಲ್ಲಿ, ಕಾವ್ಯಾ.ವಿ ಅವರ ಸಾಧನೆಗೆ ಮಾನ್ಯತೆ ನೀಡುವ ಉದ್ದೇಶದಿಂದ ಶಾಲೆಯ ಆಡಳಿತ ಮಂಡಳಿ ಈ ಕಾರ್ಯಕ್ರಮವನ್ನು ಆಯೋಜಿಸಿತು.

ಆಯನೂರಿನಿಂದ ಶಾಲಾ ಬಸ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಆಗಮಿಸಿದ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಯ ಪ್ರಮುಖರಾದ ಶೈಲಜಾ ಹುಂಚದಕಟ್ಟೆ ಅವರು ಬರುವೆ ಗ್ರಾಮದಲ್ಲಿರುವ ಕಾವ್ಯಾ.ವಿ ಅವರ ಸ್ವಗೃಹಕ್ಕೆ ತೆರಳಿ ಭವ್ಯವಾಗಿ ಸನ್ಮಾನ ನೆರವೇರಿಸಿದರು. ಈ ವೇಳೆ ಶಾಲಾ ಮಕ್ಕಳು ಹಾಡು ಹಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದು, ಗ್ರಾಮದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಯಿತು. ಇದೇ ಸಂಧರ್ಭದಲ್ಲಿ ಶಾಲೆಯ 700 ಮಕ್ಕಳು ಪ್ರೀತಿಯಿಂದ ಒಟ್ಟುಮಾಡಿದ ದೇಣಿಗೆ ಹಣವನ್ನು ಕಾವ್ಯಾ ವಿ ರವರಿಗೆ ಹಸ್ತಾಂತರಿಸಲಾಯಿತು.

ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್ ತಂಡಕ್ಕೆ ಮೂವರು ಆಟಗಾರ್ತಿಯರು ಆಯ್ಕೆಯಾಗಿದ್ದು, ಕಾವ್ಯಾ.ವಿ ಅವರು ಆಲ್–ರೌಂಡರ್ ಆಗಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಶೈಲಜಾ ಹುಂಚದಕಟ್ಟೆ ಅವರು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ನಿವೃತ್ತ ಶಿಕ್ಷಕಿ ಗೊನ್ಸಾಲಿಸಾ , ವಾತ್ಸಲ್ಯ ಶಾಲೆಯ ಶಿಕ್ಷಕರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

4 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

17 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

19 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

22 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

22 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

22 hours ago