ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು

Two brothers convicted for attacking a Police Sub-Inspector during a ganja case investigation in Shivamogga. Court sentences them to two years jail, imposes fine and orders compensation to the PSI and witnesses.

ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು

ಶಿವಮೊಗ್ಗ: ಗಾಂಜಾ ಪ್ರಕರಣದ ವಿಚಾರಣೆಗೆ ಆರೋಪಿಯನ್ನು ಕರೆದುಕೊಂಡು ಹೋಗುವ ವೇಳೆ ಪಿಎಸ್‌ಐ ಹಾಗೂ ಪೊಲೀಸರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಅಣ್ಣ–ತಮ್ಮರಿಗೆ ನ್ಯಾಯಾಲಯ ಎರಡು ವರ್ಷಗಳ ಕಾರಾವಾಸ, ದಂಡ ಹಾಗೂ ಪರಿಹಾರ ವಿಧಿಸಿದೆ.

2022ರಲ್ಲಿ ಕುಂಸಿ ಠಾಣೆ ವ್ಯಾಪ್ತಿಯ ಆಯನೂರು ಸಮೀಪದ ಮಂಡಘಟ್ಟದಲ್ಲಿ ಈ ಘಟನೆ ನಡೆದಿತ್ತು. ಗಾಂಜಾ ಪ್ರಕರಣ (ಗುನ್ನೆ ನಂ.163/2020) ಸಂಬಂಧ ಆರೋಪಿಯಾದ ಮಧುಕುಮಾರ್‌ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ, ಆತನ ಸಹೋದರ ಮನುಕುಮಾರ್ ಪಿಎಸ್‌ಐ ನವೀನ್ ಮಠಪತಿ ಅವರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದನು. ಬಳಿಕ ಮಧುಕುಮಾರ್ ಸಹ ಪೊಲೀಸರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿ ತಪ್ಪಿಸಿಕೊಂಡಿದ್ದನು.

ಈ ಸಂಬಂಧ ಪಿಎಸ್‌ಐ ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.164/2020 ಅಡಿಯಲ್ಲಿ ಐಪಿಸಿ ಕಲಂಗಳು 324, 504, 307, 353, 332, 186, 323, 506 ಸಹಿತ 34ರಂತೆ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಸಂಜೀವ್ ಕುಮಾರ್ (ಹಾಲಿ ಡಿವೈಎಸ್ಪಿ, ಶಿವಮೊಗ್ಗ ಉಪವಿಭಾಗ) ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಯಶವಂತ ಕುಮಾರ್ ಫೆ.6ರಂದು ಮಂಡಘಟ್ಟದ ಮನುಕುಮಾರ್ ಅಲಿಯಾಸ್ ಮನು (23) ಹಾಗೂ ಮಧುಕುಮಾರ್ ಅಲಿಯಾಸ್ ಮಧು (24) ಅವರಿಗೆ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಪ್ರತಿಯೊಬ್ಬರಿಗೂ ₹17,500 ದಂಡ ವಿಧಿಸಿದ್ದಾರೆ.

ಇದಲ್ಲದೆ, ಪಿರ್ಯಾದುದಾರ ಪಿಎಸ್‌ಐ ನವೀನ್ ಮಠಪತಿ ಅವರಿಗೆ ₹20,000 ಮತ್ತು ಸಾಕ್ಷಿದಾರ ಬಸವಂತಪ್ಪ ಅವರಿಗೆ ₹10,000 ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

4 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

5 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

6 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

7 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

14 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

14 hours ago