Malur police cracked a centering sheet theft case in Tirthahalli taluk by arresting a scrap dealer from Byndoor and recovering iron sheets and a goods vehicle worth lakhs.
ತೀರ್ಥಹಳ್ಳಿ: ತಾಲ್ಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದ್ದ ಮನೆ ನಿರ್ಮಾಣ ಸಾಮಗ್ರಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ಮೂಲದ ಗುಜರಿ ವ್ಯಾಪಾರಿಯನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.
ಕೂಡಿಗೆ ಗ್ರಾಮದ ಗಬಡಿಯ ಮೇಘರಾಜ್ ಅವರು ತಮ್ಮ ನೂತನ ಮನೆಯ ಎರಡನೇ ಮಹಡಿಯ ಸ್ಲಾಬ್ ಕೆಲಸಕ್ಕಾಗಿ ಸುಮಾರು 45,000 ರೂ. ಮೌಲ್ಯದ 150 ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳನ್ನು ಮನೆಯ ಪಕ್ಕದಲ್ಲೇ ಇಟ್ಟಿದ್ದರು. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಅಜ್ಞಾತ ಕಿಡಿಗೇಡಿಗಳು ಈ ಶೀಟ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ್ದರು. ಈ ಕುರಿತು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಿಖಿಲ್ ಬಿ ಅವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಅರವಿಂದ್ ಎನ್ ಕಲಗುಚ್ಚಿ ಹಾಗೂ ಮಾಳೂರು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪಿಎಸ್‌ಐ ಸುನೀಲ್ ಬಿ.ಸಿ ಮತ್ತು ತಂಡವು ಕಾರ್ಯಾಚರಣೆ ನಡೆಸಿ, ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಶಿರೂರು ನಿವಾಸಿ ರಶೀದ್ ಅಲಿಯಾಸ್ ಮೊಹಿದ್ದೀನ್ (42) ಎಂಬಾತನನ್ನು ಬಂಧಿಸಿದೆ.
ಬಂಧಿತ ಆರೋಪಿಯಿಂದ ಸುಮಾರು 1,00,000 ರೂ. ಮೌಲ್ಯದ 150 ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 1,00,000 ರೂ. ಮೌಲ್ಯದ ಮಹಿಂದ್ರಾ ಸುಪ್ರಾ ಮ್ಯಾಕ್ಸಿ ಟ್ರಕ್ ಅನ್ನು ಜಪ್ತಿ ಮಾಡಲಾಗಿದೆ.
ತನಿಖೆ ವೇಳೆ ವಶಪಡಿಸಿಕೊಂಡ ಶೀಟ್‌ಗಳಲ್ಲಿ 50 ಶೀಟ್‌ಗಳು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮತ್ತೊಂದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ್ದವು ಎಂಬುದು ಬೆಳಕಿಗೆ ಬಂದಿದೆ.
ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…