ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್

ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾದ ರಿಪ್ಪನ್‌ಪೇಟೆಯ ರಕ್ಷಿತಾ ಕೆ ಎಸ್

ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ ಎಸ್ ಅವರು ಸಿವಿಲ್ ನ್ಯಾಯಧೀಶೆ (civil judge) ಹುದ್ದೆಗೆ ಆಯ್ಕೆಯಾಗುವ ಮೂಲಕ ಗ್ರಾಮೀಣ ಪ್ರದೇಶದ ಪ್ರತಿಭೆಗೆ ಹೊಸ ಆಯಾಮ ನೀಡಿದ್ದಾರೆ. ಅತೀ ಕಿರಿಯ ವಯಸ್ಸಿನಲ್ಲಿ ನ್ಯಾಯಾಂಗ ಸೇವೆಗೆ ಪ್ರವೇಶ ಪಡೆದಿರುವುದು ಅವರ ಶ್ರಮ, ಸಾಧನೆ ಮತ್ತು ನಿಷ್ಠೆಯ ಪ್ರತಿಬಿಂಬವಾಗಿದೆ.

ಕಾಳೇಶ್ವರ ಗ್ರಾಮದ ಸತ್ಯನಾರಾಯಣ್ ಹಾಗೂ ನಾಗರತ್ನ ದಂಪತಿಗಳ ಪುತ್ರಿಯಾದ ರಕ್ಷಿತಾ, ಶಿಕ್ಷಣದ ಮೊದಲ ಹಂತದಿಂದಲೇ ಸಾಧನೆಯ ಹಾದಿಯಲ್ಲಿ ಮುನ್ನಡೆದಿದ್ದಾರೆ.

ರಕ್ಷಿತಾ ಕೆ ಎಸ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಾಳೂರು ಸರ್ಕಾರಿ ಶಾಲೆಯಲ್ಲಿ ಪೂರೈಸಿ ನಂತರ ಪಟ್ಟಣದ ಸರ್ಕಾರಿ ಹೈಸ್ಕೂಲ್‌ನಲ್ಲಿ 8ರಿಂದ 10ನೇ ತರಗತಿ ತನಕ ವಿದ್ಯಾಭ್ಯಾಸ ಮುಗಿಸಿದ ಅವರು, ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ (ವಾಣಿಜ್ಯ ವಿಭಾಗ) ಪೂರ್ಣಗೊಳಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ಪದವಿ ಮುಗಿಸಿದ್ದಾರೆ.

ಉನ್ನತ ಶಿಕ್ಷಣದ ಭಾಗವಾಗಿ ಶಿವಮೊಗ್ಗದ ನ್ಯಾಷನಲ್ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ರಕ್ಷಿತಾ, ಬಳಿಕ ಶಿವಮೊಗ್ಗದ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ ನ್ಯಾಯಾಂಗ ಅನುಭವ ಸಂಪಾದಿಸಿದ್ದರು.

ಈ ವರ್ಷ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ನೇರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತದಿಂದ ಆಯ್ಕೆಯಾದ 83 ವಕೀಲರಲ್ಲಿ ರಕ್ಷಿತಾ ಕೆ ಎಸ್ ಅವರು 42ನೇ ಸ್ಥಾನ ಪಡೆದು ಸಿವಿಲ್ ನ್ಯಾಯಧೀಶೆಯಾಗಿ ನೇಮಕಗೊಂಡಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಬಂದ ಯುವತಿಯೊಬ್ಬರು ನ್ಯಾಯಾಂಗ ವ್ಯವಸ್ಥೆಯ ಮಹತ್ವದ ಸ್ಥಾನಕ್ಕೇರಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ರಕ್ಷಿತಾ ಕೆ ಎಸ್ ಅವರ ಈ ಸಾಧನೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಪ್ರೇರಣೆಯಾಗಿದ್ದು, “ಶಿಕ್ಷಣ ಮತ್ತು ಪರಿಶ್ರಮವೇ ಯಶಸ್ಸಿನ ದಾರಿ” ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ನ್ಯಾಯಧೀಶೆ ರಕ್ಷಿತಾ ಕೆ ಎಸ್ ಅವರಿಗೆ ಪೋಸ್ಟ್‌ಮ್ಯಾನ್ ಸುದ್ದಿ ಬಳಗದ ವತಿಯಿಂದ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

24 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago