w
Headlines
Home » ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

GridArt 20260218

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರೊಂದಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲುಹಳ್ಳ ಗ್ರಾಮದ ಕಿರಾಣಿ ಅಂಗಡಿಯ ಮಾಲೀಕ ಪರಮೇಶ್ವರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಪಡೆದ ಸಬ್‌ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದಾಗ, ಅಂಗಡಿಯ ಮುಂದೆ 600 ರೂ. ಮೌಲ್ಯದ ಒಟ್ಟು 12 ಮದ್ಯಪೌಚ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಿರುವುದು ಅಬಕಾರಿ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿರುವುದು ಶ್ಲಾಘನೀಯವಾಗಿದೆ.

ಈ ಸಂಧರ್ಭದಲ್ಲಿ ಸಿಬ್ಬಂದಿಗಳಾದ ಉಮೇಶ್ , ರಾಮಚಂದ್ರ , ವಿಶ್ವನಾಥ್ ಹಾಗೂ ಅವಿನಾಶ್ ಇದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.