ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!
Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರೊಂದಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯನ್ನು ವಶಕ್ಕೆ ಪಡೆದು ಆತನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲ್ಲುಹಳ್ಳ ಗ್ರಾಮದ ಕಿರಾಣಿ ಅಂಗಡಿಯ ಮಾಲೀಕ ಪರಮೇಶ್ವರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಪಡೆದ ಸಬ್ಇನ್ಸ್ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದಾಗ, ಅಂಗಡಿಯ ಮುಂದೆ 600 ರೂ. ಮೌಲ್ಯದ ಒಟ್ಟು 12 ಮದ್ಯಪೌಚ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಿರುವುದು ಅಬಕಾರಿ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿರುವುದು ಶ್ಲಾಘನೀಯವಾಗಿದೆ.
ಈ ಸಂಧರ್ಭದಲ್ಲಿ ಸಿಬ್ಬಂದಿಗಳಾದ ಉಮೇಶ್ , ರಾಮಚಂದ್ರ , ವಿಶ್ವನಾಥ್ ಹಾಗೂ ಅವಿನಾಶ್ ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್