ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ

Vinanti AY, a Health Protection Officer from Ripponpete, secured first rank in the BA degree examination conducted by Karnataka State Open University and received her degree at the Mysuru convocation ceremony.

ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ

ರಿಪ್ಪನ್‌ಪೇಟೆ : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ (ಕೆಎಂಒಯು) ಬಿಎ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿ ವಿನಂತಿ ಎ ವೈ ಅವರು ಅಪೂರ್ವ ಶೈಕ್ಷಣಿಕ ಸಾಧನೆ ಮಾಡಿದ್ದಾರೆ.

ಶನಿವಾರ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾನ್ಯ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಅವರು ಪದವಿಯನ್ನು ಸ್ವೀಕರಿಸಿದರು.

ರಿಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಂತಿ ರವರು ಸಾರ್ವಜನಿಕ ಸೇವೆಯ ಜವಾಬ್ದಾರಿಗಳೊಂದಿಗೆ ಉನ್ನತ ಶಿಕ್ಷಣವನ್ನು ಸಮರ್ಥವಾಗಿ ಸಂಯೋಜಿಸಿ ಈ ಸಾಧನೆಯನ್ನು ಗಳಿಸಿರುವ ಅವರ ಕಾರ್ಯಕ್ಕೆ ಶೈಕ್ಷಣಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ದಿನನಿತ್ಯದ ಕರ್ತವ್ಯಗಳ ನಡುವೆಯೂ ಅಧ್ಯಯನಕ್ಕೆ ಸಮಯ ಮೀಸಲಿಟ್ಟು, ಶಿಸ್ತಿನ ಹಾಗೂ ನಿರಂತರ ಅಧ್ಯಯನದ ಮೂಲಕ ಅವರು ಈ ಮಹತ್ವದ ಗುರಿಯನ್ನು ಸಾಧಿಸಿದ್ದಾರೆ ಎನ್ನಲಾಗಿದೆ.
ಉನ್ನತ ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿನಂತಿ ಎ ವೈ ಅವರ ಈ ಸಾಧನೆಗೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಶಿಸ್ತಿನ ಅಧ್ಯಯನ ಕ್ರಮ, ನಿರಂತರ ಪರಿಶ್ರಮ ಹಾಗೂ ಗುರಿಯತ್ತ ಕೇಂದ್ರೀಕೃತವಾದ ಪ್ರಯತ್ನವೇ ಈ ಯಶಸ್ಸಿನ ಹಿಂದಿನ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.

ವಿನಂತಿ ಎ ವೈ ಅವರು ರಿಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಅವರು, ವೃತ್ತಿಪರ ಜವಾಬ್ದಾರಿಗಳ ಜೊತೆಗೆ ಶಿಕ್ಷಣದಲ್ಲೂ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ.

ವಿನಂತಿ ಎ ವೈ ಅವರು ಪಟ್ಟಣದ ಕುವೆಂಪುನಗರ ನಿವಾಸಿ ನವೀನ್  ಅವರ ಪತ್ನಿಯಾಗಿದ್ದು, ನಿವೃತ್ತ ಬಿಎಸ್‌ಎನ್‌ಎಲ್ ಉದ್ಯೋಗಿ ಪುಟ್ಟಪ್ಪ ಅವರ ಸೊಸೆಯಾಗಿದ್ದಾರೆ. ಕುಟುಂಬದ ಸಂಪೂರ್ಣ ಬೆಂಬಲ ಹಾಗೂ ಸ್ವಯಂ ಪರಿಶ್ರಮವೇ ತಮ್ಮ ಯಶಸ್ಸಿನ ಮೂಲ ಎಂದು ಅವರು ಹೇಳಿದ್ದಾರೆ.

ಪದವಿ ಪ್ರದಾನ ಸಮಾರಂಭದಲ್ಲಿ ಸಹಪಾಠಿಗಳು, ಅಧ್ಯಾಪಕರು ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದು, ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

ಶಿಕ್ಷಣ ಹಾಗೂ ಸೇವಾ ಕ್ಷೇತ್ರ ಎರಡರಲ್ಲೂ ಸಾಧನೆ ಮಾಡುತ್ತಿರುವ ವಿನಂತಿ ಎ ವೈ ಅವರ ಯಶಸ್ಸು ಯುವಜನತೆ ಮತ್ತು ಮಹಿಳೆಯರಿಗೆ ಪ್ರೇರಣೆಯಾಗಿದೆ ಅವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…

3 hours ago

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…

4 hours ago

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…

4 hours ago

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ

ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…

4 hours ago

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…

8 hours ago

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ – ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!?? ಈ ಸುದ್ದಿ ನೋಡಿ

ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್‌ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…

10 hours ago