ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ

ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ

ಹುಂಚ ಮಂಡಲ ಹಿಂದೂ ಸಂಗಮ ಕಾರ್ಯಕ್ರಮ | ಬೃಹತ್ ಶೋಭಾಯಾತ್ರೆ

POSTMAN NEWS KANNADA

ಹುಂಚ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬಂತಹ ಸಿದ್ಧಾಂತವು ಹಿಂದುಗಳನ್ನು ಜಾಗೃತಗೊಳಿಸಿ ಭಾರತ ವಿಶ್ವಗುರುವನ್ನಾಗಿಸಿದೆ. ಹಿಂದೂ ಸಮಾಜ ಜಗತ್ತಿನ ಅತ್ಯಂತ ಹಿರಿಯ ಸಮಾಜ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ ಸಂಸ್ಕೃತಿ ನಮ್ಮದು ಎಂದು ಆರ್ ಎಸ್ ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು.

ಶನಿವಾರ ನಡೆದ ಹುಂಚ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರ್ ಎಸ್ ಎಸ್ ತನ್ನ ಶತಮಾನೋತ್ಸವ ಕಾರ್ಯಕ್ರಮವನ್ನು ಆಚರಿಸಿಕೊಳ್ಳುತ್ತಿಲ್ಲ ಅದರ ಬದಲಾಗಿ ಹಿಂದೂ ಸಮಾಜವನ್ನು ಜಾಗೃತಗೊಳಿಸಲು ಹಿಂದೂ ಸಂಗಮ ಕಾರ್ಯಕ್ರಮವನ್ನು ಸಮಾಜವೇ ಸಂಘಟಿಸಿದೆ ಎಂದರು.

ಆತ್ಮವಿಸ್ಮೃತಿಗೆ ಒಳಗಾಗಿದ್ದ ಹಿಂದೂ ಸಮಾಜವನ್ನು ಸಂಘಟಿಸಿದ್ದು ರಾಷ್ಟ್ರೀಯ ಸ್ವಯಂಸೇವಕ ಸಂಘ , ಒಂದು ಕಾಲಘಟ್ಟದಲ್ಲಿ ಹಿಂದೂ ಎಂದು ಹೇಳಿಕೊಳ್ಳಲು ಆತ್ಮವಿಶ್ವಾಸವಿಲ್ಲದಂತಹ ಕಾಲದಲ್ಲಿ ಹಿಂದೂ ಸಮಾಜವನ್ನು ಸಂಘಟಿಸಿ ನಾನೊಬ್ಬ ಹಿಂದೂ ಇಂದು ಎದೆಯುಬ್ಬಿಸಿ ಹೇಳುವಂತೆ ಮಾಡಿದ್ದು ಸಂಘ ಎಂದು ಹೇಳಿದರು.

ಇದು ಪರಿವರ್ತನೆಯ ಕಾಲ, ಸಂಘವು ಪಂಚಪರಿವರ್ತನೆಯ ಮುಖಾಂತರ ಭಾರತವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ವ್ಯಕ್ತಿ- ಕುಟುಂಬ-ಸಮಾಜವಾಗಿ ನಾವು ಜಾಗೃತವಾಗಬೇಕೆಂಬ ಆಶಯದಿಂದ ಸಂಘವು ಕುಟುಂಬ ಪ್ರಬೋಧನ, ಸ್ವದೇಶಿ, ಪರಿಸರ ಸಂರಕ್ಷಣೆ, ಸಾಮರಸ್ಯ, ನಾಗರಿಕ ಶಿಷ್ಟಾಚಾರ ಎಂಬಂತಹ ಸಮಾಜ ಪರಿವರ್ತನೆಯ ಜಾಗೃತಿಯ ಸಂದೇಶವನ್ನು ಸಾರುತ್ತಿದೆ ಎಂದು ಹೇಳಿದರು.

ತದನಂತರ ಮಾತನಾಡಿದ ಲೋಹಿತಾಶ್ವ ಕೇದಿಗ್ಗೆರೆ ಮಕ್ಕಳಲ್ಲಿ ಸನಾತನ ಸಂಸ್ಕೃತಿಯ ಸಂಸ್ಕಾರಗಳನ್ನು ಬಾಲ್ಯದಲ್ಲಿಯೇ ತಿಳಿಸಿ. ತಂದೆ ತಾಯಿ ಆಲೋಚಿಸಿ ನಾವು ನಮ್ಮ ಮಕ್ಕಳಿಗೆ ಮಾತೃಭಾಷೆಯಲ್ಲಿಯೇ ಶಿಕ್ಷಣ ಕೊಡಬಹುದಾ? , ನಮ್ಮ ಮಕ್ಕಳ ಹುಟ್ಟುಹಬ್ಬವನ್ನು ಹಿಂದೂ ಸಂಸ್ಕೃತಿಯಂತೆ ಆಚರಿಸಬಹುದಾ?, ಸ್ವದೇಶಿ ಬಟ್ಟೆಗಳನ್ನೇ ಧರಿಸುವಂತೆ ಮಕ್ಕಳಿಗೆ ತಿಳಿ ಹೇಳಬಹುದಾ? ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಭಾರತೀಯ ಇತಿಹಾಸವನ್ನು ತಿರುಚಿ ನಮ್ಮ ಮಕ್ಕಳಿಗೆ ನೈಜ ಇತಿಹಾಸವನ್ನು ಹೇಳದೆ ಈ ಹಿಂದಿನ ಸರಕಾರಗಳು ವಂಚಿಸಿದೆ.
ಭಾರತದ ಗತವೈಭವದ ಇತಿಹಾಸವನ್ನು ನಮ್ಮ ಮಕ್ಕಳು ಅರಿತರೆ ಎಲ್ಲಿ ಹಿಂದೂ ಭಾವ ಜಾಗೃತವಾಗುತ್ತದೋ ಎಂದು ಸ್ವಾತಂತ್ರ್ಯದ ನಂತರ ಬಂದಂತಹ ಶಿಕ್ಷಣ ಸಚಿವರು ಬ್ರಿಟಿಷ್ ಇತಿಹಾಸವನ್ನು ಮತ್ತು ತಮ್ಮ ಅಜೆಂಡಗಳನ್ನು ಪಠ್ಯದಲ್ಲಿ ಸೇರಿಸಿದರು ಎಂದು ಹೇಳಿದರು.

ಹಿಂದೂ ಸಂಗಮ ಆಯೋಜನ ಸಮಿತಿಯ ಅಧ್ಯಕ್ಷ ವಿನಯ್ ವಿ ಎಂ ಮಾತನಾಡಿ ಹೊಸನಗರ ತಾಲೂಕಿನ ಕೊನೆಯ ಕಾರ್ಯಕ್ರಮವಿದು ಇಡೀ ತಾಲೂಕಿನಲ್ಲಿ ಹಿಂದೂಸಂಗಮ ಕಾರ್ಯಕ್ರಮ ಅತ್ಯಂತ ಸಂಘಟಿತವಾಗಿ ನಡೆದಿದೆ. ಹಿಂದೂ ಸಂಗಮದಿಂದ ಹೊಸನಗರ ತಾಲೂಕಿನ ಹಿಂದೂ ಸಮಾಜ ಜಾಗೃತಿಯಾಗಿದೆ ಎಂಬ ಸಂದೇಶವು ರವಾನೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಬೃಹತ್ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಮಕ್ಕಳ ಛದ್ಮವೇಷ, ಡೊಳ್ಳು ಕುಣಿತ ಆಕರ್ಷಕವಾಗಿತ್ತು.

ರಂಗೋಲಿ ಸ್ಪರ್ಧೆ, ಛದ್ಮವೇಷ, ಪ್ರಬಂಧ ಸ್ಪರ್ಧೆ ಭಾಗವಹಿಸಿದ ಸ್ಪರ್ಧಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವು ಜನಮನ ಸೆಳೆಯಿತು.

ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ನಾಗೇಶ್ ಪೈ ,ಸುಬ್ರಮಣ್ಯ,ಸುರೇಂದ್ರ ಗೌಡ್ರು ಇವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಂತ್ ಹೆಚ್. ಕೆ ವಹಿಸಿದ್ದರು.
ನಿರ್ವಹಣಾ ಸಮಿತಿ ಅಭಿಷೇಕ್, ವಿನಾಯಕ,ಕಿರಣ್, ನಾಗೇಂದ್ರ, ಯದು, ವೃಷಭೇಂದ್ರ, ನಟೇಶ್,ಸಂಜಯ, ಜಗದೀಶ್,ಪರ್ವತಣ್ಣ, ಶ್ರೀಧರ್, ಚರಣ್ ಮತ್ತು ಅನೇಕ ಕಾರ್ಯಕರ್ತರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಸ್ವಾಗತಿಸಿದರು, ರಾಜಶೇಖರ್ ಪಟೇಲ್ ವಂದಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

5 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

6 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

10 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

14 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

16 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago