w
Headlines
Home » ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು

ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು

GridArt 20260228

A Durgaamba bus traveling from Kundapura to Shivamogga caught fire near Hulikal–Balebare Ghat on Friday afternoon. All 36 passengers escaped safely without injuries.

ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ.

ಘಟನೆಯ ವೇಳೆ ಬಸ್‌ನಲ್ಲಿ ಸುಮಾರು 36 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಇಂಜಿನ್ ಭಾಗದಲ್ಲಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಇಡೀ ಬಸ್‌ಗೆ ಆವರಿಸಿದರೂ, ಚಾಲಕ ಹಾಗೂ ಸಿಬ್ಬಂದಿಯ ಎಚ್ಚರಿಕೆಯಿಂದ ಪ್ರಯಾಣಿಕರು ತಕ್ಷಣವೇ ಬಸ್‌ನಿಂದ ಇಳಿದು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಕಿಯ ತೀವ್ರತೆಯಿಂದ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.