w
Headlines
Home » ಪರೀಕ್ಷೆಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಪರೀಕ್ಷೆಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

GridArt 20260228

A tragic incident in Belagavi’s Chikkodi taluk where a 17-year-old II PUC student collapsed due to a heart attack while preparing to leave for her exam, leading to her untimely death and grief in the village.

ಚಿಕ್ಕೋಡಿ (ಬೆಳಗಾವಿ): ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ ಮಾಳಂಗಿ (17) ಎಂದು ಗುರುತಿಸಲಾಗಿದೆ.

ಪರೀಕ್ಷೆಗೆ ತೆರಳಲು ಸಜ್ಜಾಗುತ್ತಿದ್ದ ಭೂಮಿಕಾ ಸ್ನಾನ ಮುಗಿಸಿಕೊಂಡು ಹೊರಬರುವ ವೇಳೆ ಅಚಾನಕ್ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆತಂಕಗೊಂಡ ಪೋಷಕರು ಮಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಭೂಮಿಕಾ ಕೊನೆಯುಸಿರೆಳೆದಿದ್ದಾಳೆ.

ಪರೀಕ್ಷೆ ಬರೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಮಗಳ ಅಕಾಲಿಕ ಮರಣದಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಯಿಂದ ಬಂಬಲವಾಡ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಈ ಪ್ರಕರಣವು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾರ್ಚ್ 17ರವರೆಗೆ ನಡೆಯಲಿವೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.