Kendar Preschool organizes a fun-filled Kids Carnival on February 22, from 3:30 PM to 7:30 PM, featuring games, entertainment, and creative activities for children.
ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳ ಕಾರ್ನಿವಲ್ ಸಂಭ್ರಮ
ರಿಪ್ಪನ್‌ಪೇಟೆ : ಪಟ್ಟಣದ ಕೆಂದಾರ್ ಪ್ರೀಸ್ಕೂಲ್‌ನಲ್ಲಿ ಮಕ್ಕಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಮಕ್ಕಳ ಕಾರ್ನಿವಲ್ ಕಾರ್ಯಕ್ರಮವು ಫೆಬ್ರವರಿ 22ರ ಭಾನುವಾರ ಮಧ್ಯಾಹ್ನ 3.30 ರಿಂದ ಸಂಜೆ 7.30ರವರೆಗೆ ನಡೆಯಲಿದೆ.
ಮಕ್ಕಳ ಮನರಂಜನೆ, ಕಲಿಕೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ನಿವಲ್‌ನ್ನು ಆಯೋಜಿಸಲಾಗಿದ್ದು, ವಿವಿಧ ಆಟೋಪಾಟಗಳು, ಮನರಂಜನಾ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಆಕರ್ಷಕ ಕಾರ್ಯಕ್ರಮಗಳು ಮಕ್ಕಳನ್ನು ರಂಜಿಸಲಿವೆ. ಪೋಷಕರಿಗೂ ಮಕ್ಕಳೊಂದಿಗೆ ಸಂತೋಷವಾಗಿ ಸಮಯ ಕಳೆಯಲು ಇದು ಉತ್ತಮ ಅವಕಾಶವಾಗಲಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಉತ್ಸಾಹಭರಿತ ವಾತಾವರಣ ಒದಗಿಸುವುದರ ಜೊತೆಗೆ, ಅವರ ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿವಿಧ ಚಟುವಟಿಕೆಗಳನ್ನು ರೂಪಿಸಲಾಗಿದೆ.
ಕೆಂದಾರ್ ಪ್ರೀಸ್ಕೂಲ್ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಕಾರ್ನಿವಲ್‌ಗೆ ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆ ಆಹ್ವಾನ ನೀಡಿದೆ.
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…