ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers.

ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ

ರಿಪ್ಪನ್‌ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಪೋಷಕರ ಸಹಕಾರದೊಂದಿಗೆ ತರಕಾರಿ, ಹಸಿಮೊಳಕೆ ಕಟ್ಟಿದ ಕಾಳು, ಬಗೆಬಗೆಯ ತಾಜಾ ಸೊಪ್ಪುಗಳು ಹಾಗೂ ವಿವಿಧ ತಿಂಡಿಗಳ ಅಂಗಡಿಗಳನ್ನು ತೆರೆದು ಖರೀದಿ–ಮಾರಾಟದ ಅನುಭವವನ್ನು ಪಡೆದರು.



ವಿನೂತನ ಹೆಸರಿನ ಅಂಗಡಿಗಳೊಂದಿಗೆ ಆರೋಗ್ಯಕರ ಹಸಿರುಕಾಳಿನ ಪಾನೀಯ, ರಾಗಿ ಹಾಲು, ರುಚಿಕರ ಪಾನಿಪುರಿ, ಸಮೋಸ, ಫ್ರುಟ್ ಸಲಾಡ್, ಬಜ್ಜಿ, ಬೋಂಡಾ ಮೊದಲಾದವುಗಳ ಮಾರಾಟ ಗಮನಸೆಳೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ತಂಪು ಕಬ್ಬಿನಹಾಲು, ಸೋಡಾ ಹಾಗೂ ಐಸ್‌ಕ್ರೀಮ್ ಸವಿಯಲು ವ್ಯವಸ್ಥೆ ಮಾಡಲಾಗಿತ್ತು.

ವೇದಿಕೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಂದ ವಸ್ತುಗಳ ಖರೀದಿಯ ಮೂಲಕ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಕೋಡೂರು ಗ್ರಾಮ ಪಂಚಾಯತಿಯ ನಿಕಟಪೂರ್ವ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್, SDMC ಅಧ್ಯಕ್ಷ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಹೊಸನಗರ ಕ್ಷೇತ್ರಶಿಕ್ಷಣಾಧಿಕಾರಿ ಗಣೇಶ್ ವೈ ‘ಮಕ್ಕಳ ಸಂತೆ’ ವೀಕ್ಷಿಸಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನ ಮತ್ತು ಕೌಶಲ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ಶಾಲೆಯ ಶಿಕ್ಷಕವರ್ಗ ಹಾಗೂ SDMC ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಿ, ಶಿಕ್ಷಕಿಯರಾದ ನಾಗವೇಣಿ, ಅಂಬಿಕಾ, ರುಬಿನಾ ತಾಜ್, ಸುಧಾ, ಮಾನಸ, ರೂಪಾ ಹಾಗೂ ಕ್ಲಸ್ಟರ್ ಸಿಆರ್‌ಪಿ ಪ್ರದೀಪ್ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

21 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago